ಬೆಂಗಳೂರು,ಆ.17-ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ ನಡೆಸುತ್ತಿದ್ದು, ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಟೀಕಿಸಿದ್ದಾರೆ.
ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ತನ್ನ ಎಷ್ಟೇ ಶಕ್ತಿಯನ್ನು ಪ್ರಯೋಗಿಸಿದರೂ, ನಾವು ನಮ್ಮ ಪರವಾಗಿ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದೂ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.