ಬೆಂಗಳೂರು, ಜು.13– ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಯಾವುದೇ ತಕರಾರು ಇಲ್ಲ. ಆದರೆ ಕೇಂದ್ರ ತನಿಖಾ ಸಂಸ್ಥೆಗಳು ರಾಜಕೀಯ ಅಸ್ತ್ರಗಳಾಗಬಾರದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ನಾಗೇಂದ್ರರನ್ನು ಇಡಿ ಅ„ಕಾರಿಗಳು ಬಂ„ಸಿದ್ದಾರೆ. ಇಡಿ ಸಂಸ್ಥೆಗೆ ಸಿಕ್ಕ ಮಾಹಿತಿ ಆಧಾರದ ಮೇಲೆ ತನಿಖೆ ಹಾಗೂ ಬಂಧನ ಮಾಡಿದ್ದಾರೆ. ಇದು ಕಾನೂನು ಪ್ರಕಾರ ನಡೆಯುವ ಪ್ರಕ್ರಿಯೆ. ಆದರೆ ಇದನ್ನು ರಾಜಕೀಯವಾಗಿ ಉಪಯೋಗಿಸಬಾರದು ಎಂದರು.
ಇಡಿ, ಸಿಬಿಐ ಸೇರಿ ಕೇಂದ್ರ ತನಿಖಾ ಸಂಸ್ಥೆಗಳು ರಾಜಕೀಯ ಅಸಗಳಾಗಬಾರದು ಎಂದು ಮೊದಲಿನಿಂದಲೂ ಹೇಳುತ್ತಿದ್ದೇವೆ. ತನಿಖೆಗೆ ನಮ್ಮ ತಕರಾರು ಇಲ್ಲ. ನಮ್ಮ ಸರ್ಕಾರ ಎಸ್‍ಐಟಿ ರಚನೆ ಮಾಡಿದ್ದೇವೆ. ಮಾಜಿ ಸಚಿವ ನಾಗೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ಬಸನಗೌಡ ದದ್ಧಲ್‍ರನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಬ್ಯಾಂಕ್ ವಿಚಾರಕ್ಕೆ ಸಿಬಿಐ ಕೂಡ ತನಿಖೆ ನಡೆಸುತ್ತಿದೆ. ಏಕಾಏಕಿ ಇಡಿ ಪ್ರವೇಶ ಮಾಡಿದೆ, ಅವರಿಗೆ ಮಾಹಿತಿ ಇರಬಹುದು ಅದನ್ನು ನಾವು ಅಲ್ಲಗಳೆಯುವುದಿಲ್ಲ ಎಂದು ಹೇಳಿದ್ದಾರೆ.
ಇತ್ತ ಜಾರಿ ನಿರ್ದೇಶನಾಲಯ ತನಿಖೆ ನಡೆಯುತ್ತಿರುವ ನಡುವೆಯೇ ಎಸ್‍ಐಟಿ ಕೂಡ ಇಬ್ಬರನ್ನು ಕರೆಸಿ ವಿಚಾರಣೆ ಮಾಡಿ, ಅಗತ್ಯ ಮಾಹಿತಿ ಪಡೆದಿದೆ. ಅಗತ್ಯ ಎನಿಸಿದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ, ನಿಗಮದ ಅಧ್ಯಕ್ಷ ಬಸವನಗೌಡ ದದ್ಧಲ್ ತಲೆ ಮರೆಸಿಕೊಂಡಿಲ್ಲ. ಕುಟುಂಬದ ಸದಸ್ಯರ ಜೊತೆ ಇಲ್ಲೆ ಓಡಾಡಿಕೊಂಡಿದ್ದಾರೆ ಎಂದು ನಿನ್ನೆ ನಾನು ಕೇಳಿದಾಗ ಅಧಿಕಾರಿಗಳು ಹೇಳಿದರು. ಅವರು ಎಲ್ಲಿಯೂ ತಲೆ ಮರೆಸಿಕೊಂಡಿಲ್ಲ ಎಂದು ಗೃಹ ಸಚಿವರು ಸ್ಪಷ್ಟ ಪಡಿಸಿದರು.
ನಿಗಮದ ಹಣವನ್ನು ಲೋಕಸಭೆ ಚುನಾವಣೆಗೆ ಬಳಕೆ ಮಾಡಲಾಗಿದೆ ಎಂಬ ಕಾರಣಕ್ಕೆ ಇಡಿ ತನಿಖೆ ನಡೆಸಲಾಗುತ್ತಿದೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ. ಇಡಿಯವರು ನಮ್ಮ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿಲ್ಲ, ಊಹೆ ಮಾಡಿ ಹೇಳುವುದು ನಮಗೂ ಸರಿ ಕಾಣುವುದಿಲ್ಲ ಎಂದು ಹೇಳಿದರು.
ದೇವರಾಜ ಅರಸು ಟ್ರಕ್ ಟ್ರಮಿನಲ್‍ನಲ್ಲಿ 40-50 ಕೋಟಿ ಅವ್ಯವಹಾರ ನಡೆದಿದೆ ಎಂಬ ಕಾರಣಕ್ಕೆ ಹಿಂದೆ ಸಂಸ್ಥೆಯ ಅಧ್ಯಕ್ಷರಾಗಿದ್ದ ವಿಧಾನ ಪರಿಷತ್‍ನ ಮಾಜಿ ಅಧ್ಯಕ್ಷ ವೀರಯ್ಯರನ್ನು ಬಂ„ಸಲಾಗಿದೆ ಎಂದು ಹೇಳಿದರು.
ನಾಳೆ ಸರ್ವಪಕ್ಷ ಸಭೆ:
ಕಾವೇರಿ ನದಿ ನೀರಿನ ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶದ ಹಿನ್ನೆಲೆಯಲ್ಲಿ ನಾಳೆ ಸರ್ವ ಪಕ್ಷ ಸಭೆ ಕರೆಯಲಾಗಿದೆ. ತಾಂತ್ರಿಕ ಸಮಿತಿಯವರು ನಾಳೆ ಸಭೆಯಲ್ಲಿ ನೀಡುವ ಮಾಹಿತಿಗಳೇನು ಎಂಬುದನ್ನು ಕಾದು ನೋಡಬೇಕಿದೆ. ಸುಪ್ರೀಂ ಕೋರ್ಟ್ ಯಾವ ಕಾಲದಲ್ಲಿ ಎಷ್ಟು ನೀರು ಬಿಡಬೇಕು ಎಂಬ ಕುರಿತು ಮಾರ್ಗಸೂಚಿ ನೀಡಿದೆ. ಹಿಂದಿನ ಆದೇಶಗಳು ಇವೆ. ಆದರೆ ಅಷ್ಟು ನೀರು ಬಿಡಲು ನಮ್ಮ ಬಳಿ ನೀರು ಇರಬೇಕಲ್ಲ. ಈಗಷ್ಟೆ ಮಳೆ ಶುರುವಾಗಿದೆ. ಅಣೆಕಟ್ಟೆಯಲ್ಲಿ ಎಷ್ಟು ನೀರಿದೆ, ಒಳ ಹರಿವು ಎಷ್ಟು ಎಂಬ ಬಗ್ಗೆ ತಂತ್ರಜ್ಞರು ಮಾಹಿತಿ ನೀಡಲಿದ್ದಾರೆ ಎಂದರು.
ಪ್ರತಿಭಟನೆ ಎಲ್ಲರ ಹಕ್ಕು, ಆದರೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನಗಳನ್ನು ಗಮನದಲ್ಲಿ ಇಟ್ಟುಕೊಂಡು ಪ್ರತಿಭಟನೆ ಮಾಡಬೇಕು. ಈ ವೇಳೆ ಸಾರ್ವಜನಿಕಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಸುಪ್ರೀಂಕೋರ್ಟ್‍ಗಿಂತ ಯಾರು ದೊಡ್ಡವರಾಗಲು ಸಾಧ್ಯವಿಲ್ಲ ಎಂದು ಹೇಳಿದರು.