ನವದೆಹಲಿ, ಜ.26- ದೇಶದಲ್ಲಿ ಗೋ ಮತ್ತು ಅದರ ಹಿಟ್ಟಿನ ಬೆಲೆ ಹೆಚ್ಚುತ್ತಿದೆ. ಬೆಲೆ ಏರಿಕೆ ತಪ್ಪಿಸಲು ಕೇಂದ್ರ ಸರ್ಕಾರದ ದಾಸ್ತಾನಿನಲ್ಲಿರುವ 30 ಲಕ್ಷ ಮೆಟ್ರಿಕ್ ಟನ್ ಗೋದಿಯನ್ನು ಮುಕ್ತ ಮಾರುಕಟ್ಟೆ ಯೋಜನೆಯಡಿ ಬಿಡುಗಡೆ ಮಾಡಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮುಂದಿನ ಎರಡು ತಿಂಗಳೊಳಗೆ ಭಾರತೀಯ ಆಹಾರ ನಿಗಮ (ಎಫ್ಸಿಐ) ಕೇಂದ್ರೀಯ ದಾಸ್ತಾನಿನಿಂದ 30 ಲಕ್ಷ ಮೆಟ್ರಿಕ್ ಟನ್ ಗೋಯನ್ನು ಮುಕ್ತ ಮಾರುಕಟ್ಟೆಗೆ ತರುವ ಮೂಲಕ ಗೋ ಮತ್ತು ಹಿಟ್ಟಿನ ಬೆಲೆಯಲ್ಲಾಗುವ ವ್ಯಾಪಕ ಪರಿಣಾಮ ತಡೆಯಬಹುದಾಗಿದೆ.
ಏರುತ್ತಿರುವ ಬೆಲೆಯನ್ನೂ ನಿಯಂತ್ರಿಸಲು ಸಾಧ್ಯ ಎಂದು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ದೇಶೀಯವಾಗಿ ಉತ್ಪಾದಿಸಲಾದ ಗೋ ಮತ್ತು ಅದರ ಹಿಟ್ಟಿನ ಬೆಲೆಯನ್ನು ಇಳಿಸುವ ಸಲುವಾಗಿ ವ್ಯಾಪಾರಿಗಳು, ರಾಜ್ಯ ಸರ್ಕಾರ, ಸಹಕಾರಿ ಸಂಸ್ಥೆ, ಫೆಡರೇಶನ್ಗಳು ಮತ್ತು ಪಿಎಸ್ಯುಗಳ ಮೂಲಕ ಗೋ ಮಾರಾಟ ಹೆಚ್ಚಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಹಾರಾಡಿದ ತಿರಂಗಾ
ಇ-ಹರಾಜಿನ ಅಡಿಯಲ್ಲಿ ಎಫ್ಸಿಐ ವಲಯದಿಂದ ಪ್ರತಿ ಖರೀದಿದಾರರಿಗೆ ಗರಿಷ್ಠ 3,000 ಮೆಟ್ರಿಕ್ ಟನ್ಗಳಷ್ಟು ಹಿಟ್ಟು ಗಿರಣಿದಾರರು ಮತ್ತು ಬೃಹತ್ ಖರೀದಿದಾರರು, ಮತ್ತಿತರರಿಗೆ ನೀಡಲಾಗುವುದು ಗೋಧಿ ಒದಗಿಸಲಾಗುವುದು.
ಅಲ್ಲದೆ, ಇ- ಹರಾಜು ರಹಿತವಾಗಿಯೂ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ತಮ್ಮ ಯೋಜನೆಗಳಿಗೆ ಈ ಗೋಧಿ ಸಹ ಬಳಸಿಕೊಳ್ಳಬಹುದು ಎಂದು ತಿಳಿಸಿದೆ. 2350 ರೂ. ರಿಯಾಯಿತಿ ದರದಲ್ಲಿ ಇ-ಹರಾಜು ಅಲ್ಲದೆಯೇ ಸರ್ಕಾರ ಸಾರ್ವಜನಿಕ ರಂಗದ ಉದ್ಯಮಗಳು, ಸಹಕಾರಿಗಳು, ಒಕ್ಕೂಟಗಳು, ಎನ್ಸಿಎಫ್, ನಾಫೆಡ್ಗಳಿಗೆ ಗೋ ಪೂರೈಸಲಾಗುವುದು. ಈ ವಿಶೇಷ ಮಾರಾಟದ ಖರೀದಿದಾರರು ಗೋಯನ್ನು ಹಿಟ್ಟು(ಹುಡಿ) ಮಾಡಿ ಅದನ್ನು ಪ್ರತಿ ಕೆಜಿಗೆ ಗರಿಷ್ಠ 29.50 ರೂ.ಗೆ ಜನರಿಗೆ ಮಾರಾಟ ಮಾಡಬೇಕು ಎಂಬ ಷರತ್ತು ವಿಧಿಸಲಾಗಿದೆ.
ಗೋಧಿಗೆ ಬೆಂಬಲ ಹೆಚ್ಚಿಸಿದ್ದ ಕೇಂದ್ರ: ರೈತರ ಉತ್ಪಾದನೆ ಮತ್ತು ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗೋಧಿ, ಸಾಧಿಸಿವೆ ಸೇರಿದಂತೆ ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಳೆದ ವರ್ಷ ಹೆಚ್ಚಿಸಿತ್ತು. ಆರು ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಿಸಿ ಪ್ರಕಟಿಸಲಾಗಿತ್ತು. ಕ್ವಿಂಟಾಲ್ ಗೋಗೆ 110 ರೂ. ಹೆಚ್ಚಿಸಿದರೆ, ಸಾಸಿವೆಗೆ 400 ರೂ. ಏರಿಕೆ ಮಾಡಲಾಗಿತ್ತು.
ಗಣರಾಜ್ಯೋತ್ಸವಕ್ಕೆ ಗೈರಾದ ತೆಲಂಗಾಣ ಸಿಎಂ
ಪಾಕಿಸ್ತಾನದಲ್ಲಿ ಗೋಧಿಗಾಗಿ ಹಾಹಾಕಾರ: ಪಾಕಿಸ್ತಾನದಲ್ಲಿ ಗೋ ಮತ್ತು ಅದರ ಹಿಟ್ಟಿಗಾಗಿ ಹಾಹಾಕಾರ ಉಂಟಾಗಿದೆ. ಖೈಬರ್ ಪಖ್ತುಂಖ್ವಾ, ಸಿಂಧ್ ಮತ್ತು ಬಲೂಚಿಸ್ತಾನ ಪ್ರಾಂತ್ಯಗಳಲ್ಲಿ ಗೋ ಹಿಟ್ಟು ಪಡೆಯಲು ನೂಕುನುಗ್ಗಲು ಉಂಟಾಗಿ ಕಾಲ್ತುಳಿತದ ಘಟನೆಗಳು ವರದಿಯಾಗಿವೆ.
ಮಾರುಕಟ್ಟೆಯಲ್ಲಿ ಸಿಗುವ ಸಬ್ಸಿಡಿ ಹಿಟ್ಟಿನ ಚೀಲಗಳನ್ನು ಪಡೆದುಕೊಳ್ಳಲು ಜನತೆ ಪ್ರತಿದಿನ ಹತ್ತಾರು ಗಂಟೆಗಳ ಕಾಲ ಸರದಿಯಲ್ಲಿ ನಿಲ್ಲುತ್ತಿದ್ದಾರೆ. ಶಸ್ತ್ರಸಜ್ಜಿತ ಯೋಧರ ಬೆಂಗಾವಲಿನಲ್ಲಿ ಮಿನಿ ಟ್ರಕ್ಗಳು ಮತ್ತು ವ್ಯಾನ್ಗಳು ಹಿಟ್ಟು ಹಂಚಲು ಹೋಗುತ್ತಿರುವಾಗ ವಾಹನಗಳ ಸುತ್ತಲೂ ಜನರು ಜಮಾಯಿಸಿ ಪರಸ್ಪರ ತಳ್ಳಾಟ ನಡೆಸಿರುವ ದೃಶ್ಯಗಳು ಕಂಡುಬಂದಿವೆ. ಹಿಟ್ಟಿನ ವ್ಯಾಪಾರ ಕೇಂದ್ರಗಳು ಮತ್ತು ತಂದೂರ್ಗಳಲ್ಲಿ ಘರ್ಷಣೆಗಳು ನಡೆದ ಬಗ್ಗೆಯೂ ವರದಿಯಾಗಿವೆ. ಪಾಕಿಸ್ತಾನದ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಗೋಧಿ ಮತ್ತು ಹಿಟ್ಟಿನ ಬೆಲೆಗಳು ಗಗನಕ್ಕೇರಿವೆ.
Centre, approves, sale, 30 lakh, metric tons, wheat, open market,