ನಿಯಮ ಪಾಲಿಸಿ, ಇಲ್ಲವೆ ಯಾತ್ರೆ ನಿಲ್ಲಿಸಿ : ಕೇಂದ್ರ ಸರ್ಕಾರ ಎಚ್ಚರಿಕೆ

Social Share

ನವದೆಹಲಿ,ಡಿ.21- ರಾಹುಲ್‍ಗಾಂಧಿ ಅವರು ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆ ಸಂದರ್ಭದಲ್ಲಿ ಕೊರೊನಾ ನಿಯಮಗಳನ್ನು ಪಾಲಿಸದಿದ್ದರೆ ಯಾತ್ರೆಯನ್ನು ನಿಲ್ಲಿಸಿ ಎಂದು ಕೇಂದ್ರ ಸರ್ಕಾರ ರಾಜಸ್ತಾನಕ್ಕೆ ಎಚ್ಚರಿಕೆ ನೀಡಿದೆ.

ಭಾರತ್ ಜೋಡೊ ಯಾತ್ರೆಯಲ್ಲಿ ಕೊರೊನಾ ನಿಯಮಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ನಿಮ್ಮ ಕೈಯಲ್ಲಿ ಕೊರೊನಾ ನಿಯಮ ಪಾಲಿಸಲು ಸಾಧ್ಯವಿಲ್ಲ ಎಂದು ಯಾತ್ರೆಯನ್ನು ನಿಲ್ಲಿಸಿ ಎಂದು ಸಲಹೆ ನೀಡಿದ್ದಾರೆ.

ಯಾತ್ರೆ ರಾಜಸ್ತಾನ ತಲುಪಿರುವ ಸಂದರ್ಭದಲ್ಲೇ ಮಾಂಡವಿಯಾ ವರು, ರಾಹುಲ್‍ಗಾಂಧಿ ಅವರಿಗೆ ಪತ್ರ ಬರೆದು ಕೊರೊನ ಸೋಂಕಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಬಿಜೆಪಿಗೆ ಸವಾಲಾದ ಸ್ವಪಕ್ಷೀಯರ ಅಸಮಾಧಾನ

ಇದೀಗ ರಾಜಸ್ಥಾನದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸರಿಯಾದ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತಿದೆ ಎಂದು ಖಚಿತಪಡಿಸಿಕೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ.

ಕೋವಿಡ್ ನಿಯಮಾವಳಿಗಳನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಯಾತ್ರೆಯನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಚೀನಾದಲ್ಲಿ ಕೊರೊನಾ ಸ್ಪೋಟಗೊಂಡಿರುವ ಹಿನ್ನಲೆಯಲ್ಲಿ ಯಾತ್ರೆ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡುವಂತೆ ಆರೋಗ್ಯ ಸಚಿವಾಲಯ ಸಲಹೆ ನೀಡಿದೆ ಮಾತ್ರವಲ್ಲ, ಲಸಿಕೆ ಹಾಕಿಸಿಕೊಂಡಿರುವ ಜನ ಮಾತ್ರ ಯಾತ್ರೆಯಲ್ಲಿ ಭಾಗವಹಿಸಬೇಕು.

ನನಗೆ ಕ್ಲೀನ್‍ಚಿಟ್ ಸಿಕ್ಕಿದೆ, ಸಂಪುಟ ಸೇರುವ ಭರವಸೆಯಿದೆ : ಈಶ್ವರಪ್ಪ

ಇತರ ಕೆಲ ದೇಶಗಳಲ್ಲೂ ಕಟ್ಟುನಿಟ್ಟಿನ ಕೊರೊನಾ ನಿಯಮಾವಳಿಗಳನ್ನು ಪಾಲಿಸುತ್ತಿರುವುದರಿಂದ ದೇಶದ ಎಲ್ಲ ರಾಜ್ಯಗಳು ಕೊರೊನಾ ನಿಯಮ ಪಾಲನೆಗೆ ಆಧ್ಯತೆ ನೀಡಬೇಕು ಎಂದು ಅವರು ಕೇಳಿಕೊಂಡಿದ್ದಾರೆ.

Centre, Rahul Gandhi, stop, Bharat Jodo Yatra, Covid rules, not followed,

Articles You Might Like

Share This Article