ನವದೆಹಲಿ, ಡಿ.16- ದೇಶೀಯ ಕಚ್ಚಾ ತೈಲದ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಭಾರೀ ಕಡಿತ ಮಾಡಿದ್ದು, ಶೀಘ್ರ ದಲ್ಲಿ ಪೆಟ್ರೋಲ್, ಡಿಸೇಲ್ ದರ ಕಡಿಮೆಯಾಗುವ ನಿರೀಕ್ಷೆ ಇದೆ.
ಸರ್ಕಾರಿ ಸ್ವಾಮ್ಯದ ಒಎನ್‍ಜಿಸಿ ಸಂಸ್ಥೆಗಳು ಉತ್ಪಾದಿಸುವ ಕಚ್ಚಾ ತೈಲದ ಮೇಲೆ ವಿಧಿಸಲಾಗುತ್ತಿದ್ದ ಹೆಚ್ಚುವರಿ ಅಬಕಾರಿ ಸುಂಕವನ್ನು ಪ್ರತಿ ಟನ್‍ಗೆ 4,900 ರೂ.ನಿಂದ 1,700 ರೂ.ಗೆ ಇಳಿಕೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಅಧಿಸೂಚನೆ ತಿಳಿಸಿದೆ.
ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಆರ್ಥಿಕ ಬಿಕ್ಕಟ್ಟು, ಭಾರತಕ್ಕೆ ಗುಡ್ ನ್ಯೂಸ್
ಪರಿಷ್ಕøತ ತೆರಿಗೆ ಇಂದಿನಿಂದಲೇ ಜಾರಿಗೆ ಬರುತ್ತಿದೆ. ಡೀಸೆಲ್ ರಫ್ತಿನ ಮೇಲಿನ ತೆರಿಗೆಯನ್ನೂ ಪ್ರತಿ ಲೀಟರ್‍ಗೆ 8 ರೂ.ನಿಂದ 5 ರೂ.ಗೆ ಇಳಿಕೆ ಮಾಡಲಾಗಿದೆ. ವಿಮಾನ ಇಂಧನ ಎಟಿಎಫ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‍ಗೆ 5 ರೂ.ನಿಂದ 1.5 ರೂ.ಗೆ ಇಳಿಕೆ ಮಾಡಲಾಗಿದೆ.
Centre, slashes, windfall, tax, domestic, crude oil, diesel,