ಡಿಜಿಟಲ್ ಮಾಧ್ಯಮಕ್ಕೆ ಬೀಳಲಿದೆ ಕಡಿವಾಣ

Social Share

ಜೈಪುರ,ನ.24- ಡಿಜಿಟಲ್ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ನಿಯಂತ್ರಣ ಹಾಕಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಈ ಹಿಂದೆ ಸುದ್ದಿಗಳು ಏಕಮುಖವಾಗಿದ್ದವು, ಆದರೆ, ಇತ್ತಿಚೆಗೆ ಡಿಜಿಟಲ್ ಮಾಧ್ಯಮ ಬಿತ್ತರಿಸುವ ಸುದ್ದಿಗಳು ಬಹು ಆಯಾಮಗಳನ್ನು ಹೊಂದಿರುವುದರಿಂದ ಅವುಗಳ ನಿಯಂತ್ರಣಕ್ಕೆ ಶೀಘ್ರ ಮಸೂದೆ ಮಂಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಡಿಜಿಟಲ್ ಮಾಧ್ಯಮವು ಅವಕಾಶಗಳನ್ನು ಮತ್ತು ಸವಾಲುಗಳನ್ನು ಹೊಂದಿವೆ. ಅವುಗಳ ಸಮತೋಲನಕ್ಕೆ ಏನು ಮಾಡಬಹುದು ಎಂಬ ಬಗ್ಗೆ ನಾವು ಚಿಂತಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಪತ್ರಿಕೆಗಳ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗುವುದು ಮತ್ತು ಕೇಂದ್ರ ಸರ್ಕಾರವು 1867 ರ ಪ್ರೆಸ್ ಮತ್ತು ರಿಜಿಸ್ಟ್ರೇಶನ್ ಆಕ್ಟ್ ಬದಲಿಗೆ ಹೊಸ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಿದ್ದೇವೆ ಎಂದರು.

ಕಾಂಗ್ರೆಸ್ ಟಿಕೆಟ್‍ಗೆ ಕಂಟಕವಾದ ಕುಟುಂಬ ಪಾರುಪತ್ಯ

ಹೊಸ ಕಾನೂನಿನ ಅಡಿಯಲ್ಲಿ, ಆನ್‍ಲೈನ್ ಮೋಡ್ ಮೂಲಕ ಒಂದು ವಾರದಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ, ಇದು ಈಗ ಸುಮಾರು ನಾಲ್ಕು ತಿಂಗಳುಗಳನ್ನು ತೆಗೆದುಕೊಳ್ಳುತ್ತಿದೆ.

ಹುಡುಕಿಕೊಂಡು ಬಂದು ಮನೆ ಮೇಲೆ ದಾಳಿ ಮಾಡಿದ ಆನೆ

ಪತ್ರಿಕೆಗಳು ಸರಿಯಾದ ಸಮಯದಲ್ಲಿ ಸಾಮಾನ್ಯ ಜನರ ಮುಂದೆ ಸರಿಯಾದ ಸುದ್ದಿ ಯನ್ನು ತರಬೇಕು ಎಂದು ಸಚಿವರು ಹೇಳಿದರು. ಸರಕಾರದ ಲೋಪದೋಷಗಳ ಜತೆಗೆ ಜನಕಲ್ಯಾಣ ಯೋಜನೆಗಳು ಹಾಗೂ ಸರಕಾರದ ನೀತಿಗಳು ಜನಸಾಮಾನ್ಯರಿಗೆ ತಲುಪಿಸಬೇಕು ಎಂದು ಅವರು ಕರೆ ನೀಡಿದರು.

ಮಾಧ್ಯಮಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು ಮತ್ತು ಭಯ ಮತ್ತು ಗೊಂದಲದ ವಾತಾವರಣ ಸೃಷ್ಟಿಸುವುದನ್ನು ತಪ್ಪಿಸಬೇಕು ಎಂದು ಅವರು ಮನವಿ ಮಾಡಿಕೊಂಡರು.

Centre, soon, implement, law, regulate, digital, media, minister, Anurag Thakur,

Articles You Might Like

Share This Article