ನವದೆಹಲಿ,ಜ.16-ಸುಪ್ರೀಂ ಕೋರ್ಟ್ ಕೊಲಿಜಿಯಂನಲ್ಲೂ ಸರ್ಕಾರದ ಪ್ರತಿನಿಧಿಗಳು ಇರಬೇಕು ಎಂದು ಕೇಂದ್ರ ಸರ್ಕಾರ ಬಯಸಿದೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.
ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಅಧಿಕಾರ ಹೊಂದಿರುವ ಸುಪ್ರೀಂ ಕೋರ್ಟ್ ಕೊಲಿಜಿಯಂನಲ್ಲಿ ಸರ್ಕಾರದ ಪ್ರತಿನಿಧಿಗಳು ಇರಬೇಕು ಎಂಬ ಅಭಿಪ್ರಾಯ ಹೊಂದಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಸುಪ್ರೀಂ ಕೋರ್ಟ್ನ ಉನ್ನತ ನ್ಯಾಯಾೀಧಿಶರ ಸಮಿತಿಯು ಪಾರದರ್ಶಕತೆ ಮತ್ತು ಸಾರ್ವಜನಿಕ ಹೊಣೆಗಾರಿಕೆಯನ್ನು ತುಂಬಲು ಸರ್ಕಾರಿ ಪ್ರತಿನಿಗಳನ್ನು ಒಳಗೊಂಡಿರಬೇಕು ಎಂದು ಕಾನೂನು ಸಚಿವರು ಪತ್ರದಲ್ಲಿ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಠಾಣೆಯಲ್ಲೊಂದು ಗಂಧರ್ವಲೋಕ..!
ರಿಜಿಜು ಅವರು ಬರೆದಿರುವ ಪತ್ರದಿಂದ ಸರ್ಕಾರ ಮತ್ತು ನ್ಯಾಯಾಂಗದ ನಡುವೆ ಮತ್ತಷ್ಟು ಕಂದಕ ಸೃಷ್ಟಿಸುವ ಸಾಧ್ಯತೆಗಳಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.