ಉಚಿತ ಪಡಿತರ ಯೋಜನೆ ಇನ್ನೂ 1 ವರ್ಷ ವಿಸ್ತರಣೆ

Social Share

ನವದೆಹಲಿ,ಫೆ.1- ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿ ಬಡವರಿಗೆ ಇನ್ನೂ ಒಂದು ವರ್ಷಗಳ ಕಾಲ ಉಚಿತ ಆಹಾರ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದ್ದಾರೆ.

ಲೋಕಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 28 ತಿಂಗಳ ಕಾಲ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಿದ್ದೇವೆ ಎಂದು ತಿಳಿಸಿದರು.

ಕೇಂದ್ರ ಬಜೆಟ್‍ನ ಕೆಲವು ಮುಖ್ಯ ಅಂಶಗಳು ಇಲ್ಲಿವೆ ನೋಡಿ

ಕೋವಿಡ್ ಕಾಲದಲ್ಲಿ ಹಸಿವನ್ನು ನೀಗಿಸಿದ ಈ ಯೋಜನೆಯನ್ನು ಇನ್ನೂ ಒಂದು ವರ್ಷಗಳ ಕಾಲ ವಿಸ್ತರಿಸುತ್ತಿದ್ದೇವೆ. ಈ ಯೋಜನೆ ಜಾರಿಗೆ ಸರ್ಕಾರಕ್ಕೆ 2 ಲಕ್ಷ ಕೋಟಿ ರೂ. ಅಗತ್ಯವಿದ್ದು, ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.

ಭಾರತದ ಆರ್ಥಿಕತೆಯು ಸರಿಯಾದ ಹಾದಿಯಲ್ಲಿದೆ, ಉಜ್ವಲ ಭವಿಷ್ಯದತ್ತ ಸಾಗುತ್ತಿದೆ. 10 ವರ್ಷಗಳಲ್ಲಿ ಭಾರತ ವಿಶ್ವದ ಐದನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರ ಹೊಮ್ಮಿದೆ ಎಂದು ಸರ್ಕಾರದ ಸಾಧನೆಯನ್ನು ತಿಳಿಸಿದರು.

Centre, Free, Ration Scheme, ‘PM Garib Kalyan Anna Yojana’

Articles You Might Like

Share This Article