ಶೀಘ್ರದಲ್ಲೇ ಸಿಇಟಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟ

ಬೆಂಗಳೂರು,ಏ.21- ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಪ್ರಶ್ನೆಪತ್ರಿಕೆಗಳಿಗೆ ಆಕ್ಷೇಪಣೆ ಸಲ್ಲಿಸಲು ಏ.27 ರ ಸಂಜೆ 5.30 ರವರೆಗೆ ಕಾಲಾವಕಾಶ ನೀಡಲಾಗಿದೆ. ಸಿಇಟಿಯ ಪ್ರಶ್ನೆಪತ್ರಿಕೆಗಳಿಗೆ ಸದ್ಯದಲ್ಲೇ ಕೀ ಉತ್ತರಗಳನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳು ತಿಳಿಸಿವೆ. ಏ.18 ಮತ್ತು 19 ರಂದು ನಡೆದ ಜೀವಶಾಸ್ತ್ರ ಮತ್ತು ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರಗಳ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಅಭ್ಯರ್ಥಿಗಳು ಇ-ಮೇಲ್ ಮೂಲಕ ಕೆಇಎ ಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. … Continue reading ಶೀಘ್ರದಲ್ಲೇ ಸಿಇಟಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟ