Saturday, May 24, 2025
Homeರಾಜ್ಯನಾಳೆ (ಮೇ 24) ಸಿಇಟಿ ರಿಸಲ್ಟ್

ನಾಳೆ (ಮೇ 24) ಸಿಇಟಿ ರಿಸಲ್ಟ್

CET Result Tomorrow (May 24)

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿಸಿಇಟಿ) ಫಲಿತಾಂಶವನ್ನು ಶನಿವಾರ (ಮೇ 24) ಪ್ರಕಟಿಸಲಿದೆ.

ಅಂದು ಬೆಳಿಗ್ಗೆ 11.30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಧ್ಯಾಹ್ನ 2 ಗಂಟೆ ನಂತರ ಈ ಕೆಳಗಿನ ವೆಬ್ ಸೈಟ್ ನಲ್ಲಿ ಸಾರ್ವಜನಿಕರಿಗೆ ಫಲಿತಾಂಶದ ವಿವರಗಳು ಲಭ್ಯವಾಗಲಿವೆ.

https://cetonline.Karnataka.gov.in/ugcetrank2025/checkresult.aspx ಹಾಗೂ https://karresults.nic.in

RELATED ARTICLES

Latest News