ನಾಳೆ ಸಿಇಟಿ ಫಲಿತಾಂಶ ಪ್ರಕಟ

Social Share

ಬೆಂಗಳೂರು,ಜು.29- ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ನಾಳೆ ಪ್ರಕಟವಾಗಲಿದೆ. ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸ್ಗಳಿಗೆ ಇದೇ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿತ್ತು.

ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅದರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಕಾರದ ವೆಬ್ಸೈಟ್ನಲ್ಲಿ ತಮ್ಮ ಅಂಕಗಳನ್ನು ಜು.26ರ ಸಂಜೆಯೊಳಗೆ ಅಪೊ್ಲೀಡ್ ಮಾಡಲು ಅವಕಾಶ ನೀಡಲಾಗಿತ್ತು.

ರಾಜ್ಯದ ಒಟ್ಟು 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದರು.

ಒಟ್ಟು 2,16,559 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಜೂ.16 ಮತ್ತು 17ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮತ್ತು 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ, ಬೆಂಗಳೂರು, ಬೀದರ್, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರುಗಳಲ್ಲಿ ಕನ್ನಡ ಭಾಷಾಪರೀಕ್ಷೆ ನಡೆದಿತ್ತು.

Articles You Might Like

Share This Article