Friday, November 22, 2024
Homeಬೆಂಗಳೂರುಕಾನೂನು ಸಂಘರ್ಷಕ್ಕೊಳಗಾದ ಬಾಲಕರಿಂದ ದರೋಡೆ

ಕಾನೂನು ಸಂಘರ್ಷಕ್ಕೊಳಗಾದ ಬಾಲಕರಿಂದ ದರೋಡೆ

ಬೆಂಗಳೂರು,ಜು.30- ಕಳ್ಳತನ ಮಾಡಿದ ವಾಹನ ಬಳಸಿಕೊಂಡು ಸರಗಳ್ಳತನ ಮಾಡಿದ್ದ ಕಾನೂನು ಸಂಘರ್ಷಕ್ಕೊಳಗಾದ ನಾಲ್ವರು ಬಾಲಕರನ್ನು ಪೀಣ್ಯ ಠಾಣೆ ಪೊಲೀಸರು ವಶಕ್ಕೆ ಪಡೆದು 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರ, ಎರಡು ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.

ಕೆಂಪಯ್ಯ ಗಾರ್ಡನ್‌ ಬಳಿ ಮಹಿಳೆಯೊಬ್ಬರು ಬೆಳಿಗ್ಗೆ 6 ಗಂಟೆ ಸಮಯದಲ್ಲಿ ಕೆಲಸಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ದ್ವಿ-ಚಕ್ರ ವಾಹನದಲ್ಲಿ ಇಬ್ಬರು ಹಿಂಬಾಲಿಸಿಕೊಂಡು ಹೋಗಿ ಅವರನ್ನು ಅಡ್ಡಗಟ್ಟಿ, ಅವರ ಕೊರಳಿನಲ್ಲಿದ್ದ 30 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆಹಾಕಿ, ಗಂಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿ ಅನುಮಾನಸ್ಪದವಾಗಿ ಸುತ್ತಾಡುತ್ತಿದ್ದ ನಾಲ್ವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಆಟೋ ರಿಕ್ಷಾ ಹಾಗೂ ಒಂದು ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಚಿನ್ನದ ಸರ ಕಿತ್ತುಕೊಂಡು ಹೋಗಿರುವುದಾಗಿ ತಿಳಿಸಿದ್ದಾರೆ.

ಈ ಬಾಲಕರನ್ನು ಸುದೀರ್ಘವಾಗಿ ವಿಚಾರಣೆ ಮಾಡಿ ಅವರುಗಳಿಂದ 30 ಗ್ರಾಂ ತೂಕದ ಚಿನ್ನದ ಸರ ಹಾಗೂ ಕಳುವು ಮಾಡಿದ್ದ ಆಟೋ ರಿಕ್ಷಾ ಮತ್ತು ಎರಡು ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾನೂನು ಸಂಘರ್ಷಕ್ಕೊಳಗಾದ ನಾಲ್ವರು ಬಾಲಕರನ್ನು ರಿಮ್ಯಾಂಡ್‌ ಹೋಂಗೆ ಕಳುಹಿಸಲಾಗಿದೆ. ಪೀಣ್ಯ ಪೊಲೀಸ್‌‍ ಠಾಣೆಯ ಪೊಲೀಸ್‌‍ ಇನ್ಸ್ ಪೆಕ್ಟರ್‌ ಅನಿಲ್‌ ಕುಮಾರ್‌ ಮತ್ತು ಸಿಬ್ಬಂದಿ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

RELATED ARTICLES

Latest News