Saturday, May 4, 2024
Homeರಾಜಕೀಯಜೆಡಿಎಸ್ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದೆ : ಚಲುವರಾಯಸ್ವಾಮಿ

ಜೆಡಿಎಸ್ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದೆ : ಚಲುವರಾಯಸ್ವಾಮಿ

ಬೆಂಗಳೂರು,ಜ.6-ಜೆಡಿಎಸ್ ಅಸ್ತಿತ್ವ ಉಳಿಸಿಕೊಳ್ಳುವ ಉದ್ದೇಶದಿಂದ ಮಿತ್ರ ಪಕ್ಷ ಬಿಜೆಪಿಯಲ್ಲಿ ಒಗ್ಗಟ್ಟು ಮೂಡಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆವರೆಗೂ ಜೆಡಿಎಸ್ ಈ ಪ್ರಯತ್ನ ಮಾಡಲಿದೆ. ಬಿಜೆಪಿಗಿಂತ ಹೆಚ್ಚಾಗಿ ಜೆಡಿಎಸ್‍ಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ ಎಂದು ಟೀಕಿಸಿದರು.

ಮಾಜಿ ಸಚಿವ ವಿ.ಸೋಮಣ್ಣ ಅವರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ವಿಷಯಕ್ಕೆ ಸಂಬಂಸಿದಂತೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು. ಜೆಡಿಎಸ್, ಬಿಜೆಪಿ ಮೈತ್ರಿಯಾದ ನಂತರ ಅಸಮಾಧಾನಿತರಿದ್ದಾರೆ. ಅವರನ್ನು ಸಮಾಧಾನಪಡಿಸಿ ಲೋಕಸಭೆ ಚುನಾವಣೆವರೆಗೂ ಒಗ್ಗಟ್ಟು ಕಾಪಾಡುವ ಪ್ರಯತ್ನ ಮಾಡಲಾಗುತ್ತಿದೆ. 1994ರಲ್ಲಿ ಒಮ್ಮೆ ಮಾತ್ರ ಜನತಾದಳ ಸರಳ ಬಹುಮತ ಪಡೆದಿತ್ತು.

ಆನಂತರ ಜನತಾದಳಕ್ಕೆ ಬಹುಮತವೇ ಬಂದಿಲ್ಲ. 136 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಸರ್ಕಾರ ಹೋಗುತ್ತದೆ ಎಂದು ಹೇಳುವವರ ಬಾಯಿಗೆ ಸಕ್ಕರೆ ಹಾಕೋಣ, ಲಘುವಾಗಿ ಮಾತನಾಡುವುದು ತರವಲ್ಲ ಎಂದರು.

ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿಎಂ ಸಿದ್ದರಾಮಯ್ಯ

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಕಾರಕ್ಕೆ ಬರದಿದ್ದರೆ ಪಕ್ಷ ವಿಸರ್ಜನೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದರು. 19 ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿದೆ. ಲೋಕಸಭೆ ಚುನಾವಣೆಯಲ್ಲಿ ಏನಾಗುವುದೋ ನೋಡೋಣ ಎಂದು ಹೇಳಿದರು. ಪಕ್ಷದ ಕಾರ್ಯಕರ್ತರು, ಮುಖಂಡರಲ್ಲಿ ಭರವಸೆ ಮೂಡಿಸುವ ಉದ್ದೇಶದಿಂದ ಕಾಂಗ್ರೆಸ್ ನಿರ್ನಾಮವಾಗಲಿದೆ ಎಂದು ಹೇಳಿದ್ದಾರೆ. ವಿಧಾನಸಭೆ ಚುನಾವಣೆ ಸೋಲಿನ ನೋವಿನಲ್ಲಿದ್ದಾರೆ. ಅವರ ಬಗ್ಗೆ ಹೆಚ್ಚು ಮಾತನಾಡುವುದು ಬೇಡ ಎಂದರು.

ನೈತಿಕತೆ ಇಲ್ಲ:
ರಾಜ್ಯ ಸರ್ಕಾರ ಪ್ರಾರಂಭಿಕವಾಗಿ ರೈತರಿಗೆ ನೀಡುವ ಪರಿಹಾರ ಸಾಲದು ಎಂದು ಹೇಳಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಯಾವ ನೈತಿಕತೆ ಇದೆ. ಕೇಂದ್ರಕ್ಕೆ ಪದೇ ಪದೇ ಮನವಿ ಮಾಡಿದರೂ ಬರ ಪರಿಹಾರ ನೀಡಿಲ್ಲ. ಎನ್‍ಡಿಆರ್‍ಎಫ್ ಮಾರ್ಗಸೂಚಿ ದರವನ್ನು ಹೆಚ್ಚಳ ಮಾಡುವಂತೆ ಮನವಿ ಮಾಡುತ್ತಿದ್ದೇವೆ ಆದರೂ ಮಾಡಿಲ್ಲ. ದರ ಪರಿಷ್ಕರಣೆ ಮಾಡುವ ಅಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ರಾಜ್ಯ ಸರ್ಕಾರಕ್ಕೆ ಇಲ್ಲ. ಅಶೋಕ್ ಅವರಿಗೆ ಗೊತ್ತಿಲ್ಲದಿದ್ದರೆ ಕೇಳಿ ತಿಳಿದುಕೊಳ್ಳಲಿ.

ರಾಜ್ಯದ 50 ಲಕ್ಷ ಹೆಕ್ಟೇರ್ ಪ್ರದೇಶ ಬರಕ್ಕೆ ತುತ್ತಾಗಿದೆ. ದೇಶದಲ್ಲಿ ಮೊದಲು ಬರಪೀಡಿತ ಪ್ರದೇಶಗಳನ್ನು ಗುರುತಿಸಿ ಘೋಷಣೆ ಮಾಡಿದ ರಾಜ್ಯ ನಮ್ಮದು. ರಾಜ್ಯ ಸರ್ಕಾರ ನೀಡುವುದು ತಾತ್ಕಾಲಿಕ ಪರಿಹಾರ ಎನ್‍ಡಿಆರ್‍ಎಫ್ ಹಣ ಬಂದ ನಂತರ ರೈತರಿಗೆ ಪರಿಹಾರ ನೀಡಲಾಗುವುದು. ಅದಕ್ಕೆ ಬೇಕಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಡಲಾಗಿದೆ ಎಂದರು.

ಮೂವರು ಡಿಸಿಎಂಗಳ ನೇಮಕ ಗಾಳಿಸುದ್ದಿ ಅಷ್ಟೇ : ಗೃಹ ಸಚಿವ ಪರಮೇಶ್ವರ

ಬರ ಪರಿಹಾರ ಬಿಡುಗಡೆ ಸಂಬಂಧ ಸಚಿವರಿಗೂ, ಪ್ರಧಾನಿಗೂ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

RELATED ARTICLES

Latest News