ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಿವಂತೆ ಆಗ್ರಹ

Social Share

ಬೆಂಗಳೂರು,ಅ.17- ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇರುವ ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಚಾಮರಾಜಪೇಟೆ ನಾಗರೀಕ ಒಕ್ಕೂಟದ ಅಧ್ಯಕ್ಷ ರಾಮೇಗೌಡ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ಮಾದರಿಯಲ್ಲೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಬೇಕೆಂದು ಒತ್ತಾಯಿಸಿದರು. ನ್ಯಾಯಾಲಯದ ಆದೇಶದ ಪ್ರಕಾರ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣ ರಾಜ್ಯೋತ್ಸವ ಆಚರಣೆಗೆ ಅನುಮತಿ ಇದೆ. ಹೀಗಾಗಿ ಸರ್ಕಾರ ರಾಜ್ಯೋತ್ಸವ ಆಚರಣೆಗೂ ಅನುಮತಿ ಕೋರಿ ಮೇಲ್ಮನವಿ ಸಲ್ಲಿಸಬೇಕೆಂದು ಆಗ್ರಹಿಸಿದರು.

ಈ ಕುರಿತು ಈಗಾಗಲೇ ಕಂದಾಯ ಸಚಿವ ಆರ್. ಅಶೋಕ್ ಅವರ ಜತೆ ಚರ್ಚಿಸಲಾಗಿದೆ. ಇದಕ್ಕೆ ಅವರು ಸ್ಪಂದಿಸಿ ರಾಜ್ಯೋತ್ಸವವನ್ನು ಸಾಹಿತ್ಯ ಪರಿಷತ್‍ನಿಂದ ಆಚರಿಸಲು ಸಲಹೆ ನೀಡಿದ್ದಾರೆ. ಅವರ ಸಲಹೆ ಸಮ್ಮತವಾಗಿದ್ದು,
ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷರ ಜತೆಯೂ ಚರ್ಚಿಸಿದ್ದೇವೆ.

ನಾಡಹಬ್ಬದ ರೀತಿ ರಾಜ್ಯೋತ್ಸವ ಆಚರಣೆಗೆ ಸರ್ಕಾರ ಸಲಹೆ ನೀಡಬಹುದು ಎಂದರು. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಲಯದ ಮೊರೆ ಹೋಗಿ ರಾಜ್ಯೋತ್ಸವಕ್ಕೆ ಅನುಮತಿ ಕೇಳುವ ನಿರೀಕ್ಷೆ ಇದೆ ಎಂದು ರಾಮೇಗೌಡ ತಿಳಿಸಿದ್ದಾರೆ.

Articles You Might Like

Share This Article