ಬೆಂಗಳೂರು, ಮಾ.24- ರಜತ್, ವಿನಯ್ ಬೆನ್ನಲ್ಲೇ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿಗೆ ಟೆನ್ಷನ್ ಶುರುವಾಗಿದೆ. ನಾಡದೇವಿ ಚಾಮುಂಡೇಶ್ವರಿಗೆ ಅವಹೇಳನ ವಿಚಾರದಲ್ಲಿ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ರಕ್ಷಕ್ ಬುಲೆಟ್ ವಿರುದ್ಧ ದೂರು ನೀಡಲು ಹಿಂದೂ ಸಂಘಟನೆಗಳು ನಿರ್ಧರಿಸಿವೆ.
ನಾಡ ದೇವಿಗೆ ಅಪಮಾನಿಸಿದ್ದ ರಕ್ಷಕ್ ವಿರುದ್ಧ ಇಂದು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ನೀಡಲು ಹಿಂದೂ ಮುಖಂಡರು ಮುಂದಾಗಿದ್ದಾರೆ.ಖಾಸಗಿ ಶೋನಲ್ಲಿ ನಾಡದೇವಿಯ ಬಗ್ಗೆ ಅವಹೇಳನ ಮಾಡಿದ್ದ ರಕ್ಷಕ್ ಹಾಗೂ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಕಾರ್ಯಕ್ರಮದ ವಿರುದ್ಧವೂ ಹಿಂದೂ ಸಂಘಟನೆಗಳು ಗರಂ ಆಗಿದ್ದಾರೆ.
ಸಹಸ್ಪರ್ಧಿಯನ್ನು ಹೊಗಳುವ ಭರದಲ್ಲಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ ಎನ್ನಲಾದ ರಕ್ಷಕ್ ಶೋನಲ್ಲಿ ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು ಪ್ಯಾಂಟು ಶರ್ಟು ಹಾಕೊಂಡು ಸ್ವಿಟ್ಜರ್ಲೆಂಡ್ ನಲ್ಲಿ ಟ್ರಿಪ್ ಹೊಡಿತಿದಾಳೆ ಅನ್ನಿಸ್ತಿದೆ ಅಂತ ಡೈಲಾಗ್ ಹೊಡೆದಿದ್ದ.
ಇದು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಆಕ್ರೋಶಕ್ಕೆ ಒಳಗಾಗಿತ್ತು. ಇದೀಗ ಹಿಂದೂ ಸಂಘಟನೆಗಳಿಂದ ಕಮಿಷನರ್ ಗೆ ದೂರು ನೀಡಲಾಗುತ್ತಿದೆ.ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿದೆ ಅಂತ ದೂರು ನೀಡಿರುವ ಮುಖಂಡರುಗಳು ಬಿಗ್ ಬಾಸ್ ಸ್ಪರ್ಧಿ ರಕ್ಷಕ್ ಬುಲೆಟ್ ಹಾಗೂ ವಾಹಿನಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.