ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ

Social Share

ಮೈಸೂರು,ಜು.20- ನಗರದ ಚಾಮುಂಡಿ ಬೆಟ್ಟದಲ್ಲಿ ನೆಲೆ ನಿಂತಿರುವ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಇಂದು ವರ್ಧಂತಿ ಮಹೋತ್ಸವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳು ನಡೆಯುತ್ತಿವೆ. ದೇವಿಗೆ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಸಹಸ್ರನಾಮಾರ್ಚನೆ ಮತ್ತು ಇತರ ಪೂಜಾ ಕೈಂಕರ್ಯಗಳು ನಡೆದಿವೆ. ಆಷಾಢ ಮಾಸದ ಕೃಷ್ಣಪಕ್ಷದ ಸಪ್ತಮಿ ರೇವತಿ ನಕ್ಷತ್ರದಂದು ವರ್ಧಂತಿ ಇರುವುದರಿಂದ ಇಂದು ಬಹಳ ವಿಶೇಷವಾಗಿತ್ತು.

ಸಂಪ್ರದಾಯದಂತೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಾಡ ಅದೇವತೆಗೆ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜಮಾತೆ ಪ್ರಮೋದಾದೇವಿ ಒಡೆಯರ್ ಪೂಜೆಯಲ್ಲಿ ಭಾಗಿಯಾಗಿದ್ದರು. ಚಿನ್ನದ ಪಲ್ಲಕ್ಕಿಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಚಿನ್ನದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ದೇವಸ್ಥಾನದ ಸುತ್ತ ಮೆರವಣಿಗೆ ಮಾಡಲಾಯಿತು. ಈ ವೇಳೆ 21 ಕುಶಾಲತೋಪು ಸಿಡಿಸುವ ಮೂಲಕ ತಾಯಿಗೆ ಗೌರವ ಅರ್ಪಿಸಲಾಯಿತು. ಬ್ಯಾಂಡ್, ಮಂಗಳವಾದ್ಯ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿವೆ. ಸಹಸ್ರಾರು ಭಕ್ತರು ಪಾಲ್ಗೊಂಡು ವೈಭವವನ್ನು ಕಣ್ತುಂಬಿಸಿಕೊಂಡರಲ್ಲದೆ, ಪುನೀತರಾದರು.

ಬಂದೋಬಸ್ತ್: ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬೆಟ್ಟದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ಏರ್ಪಡಿಸಲಾಗಿತ್ತು.

ವಾಹನಗಳ ನಿಷೇಧ: ಸಾರ್ವಜನಿಕರ ವಾಹನಗಳಿಗೆ ನಿಷೇಸಲಾಗಿದ್ದು, ಸಾರ್ವಜನಿಕರನ್ನು ಬೆಟ್ಟದ ಮೇಲೆ ಕರೆದೊಯ್ಯಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಹೆಲಿಪ್ಯಾಡ್‍ನಿಂದ ಸಾರಿಗೆ ಸಂಚಾರಿ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಚಾಮುಂಡೇಶ್ವರಿ ದಾಸೋಹ ಭವನದಲ್ಲಿ ನಿರಂತರ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ.

Articles You Might Like

Share This Article