ಚಾಮುಂಡಿ ದರ್ಶನ ಟಿಕೆಟ್ ದರ ದಿಡೀರ್ ಏರಿಕೆ: ಭಕ್ತರ ಆಕ್ರೋಶ

Social Share

ಮೈಸೂರು,ಜ.2- ಹೊಸ ವರ್ಷ ಪ್ರಾರಂಭ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಆದರೆ ಮೈಸೂರಿನಲ್ಲಿ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. 300ರೂ.ಗಳ ವಿಶೇಷ ದರ್ಶನವೆಂದು ಹಣ ಪಡೆಯುತ್ತಿದ್ದು, ಆಡಳಿತ ಮಂಡಳಿಯ ವಿರುದ್ಧ ಹಗಲು ದರೋಡೆ ನಡೆಸುತ್ತಿದ್ದಾರೆ ಎಂದು ಭಕ್ತರು ಆರೋಪಿಸಿದ್ದಾರೆ.
ಹೊಸವರ್ಷದ ಪ್ರಯುಕ್ತ ನಿನ್ನೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ತಾಯಿಯ ದರ್ಶನಕ್ಕೆ ಆಗಮಿಸಿದ್ದಾರೆ. ಕಳೆದೆರಡು ವರ್ಷಗಳಿಂದ ಕೊರೋನಾ ಹಿನ್ನೆಲೆಯಲ್ಲಿ ನಿರ್ಬಂಧವನ್ನು ವಿಧಿಸಲಾಗಿತ್ತು. ಈ ಬಾರಿ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ಯಾವುದೇ ಅಡ್ಡಿ ಇಲ್ಲದೇ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಹೊಸ ವರ್ಷದಲ್ಲಿ ಬೆಟ್ಟಕ್ಕೆ ಭಕ್ತರು ಬರುತ್ತಾರೆಂಬ ನಿರೀಕ್ಷೆಯಲ್ಲಿ 300ರೂ.ಗಳ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇವಳದ ಆಡಳಿತಾಕಾರಿ ಯತೀಂದ್ರ ಎಂಬವರು 300ರೂ.ಗಳ ವಿಶೇಷ ದರ್ಶನದ ರಸೀದಿ ನೀಡುತ್ತಿದ್ದು, ಇಷ್ಟೊಂದು ಹಣ ಯಾಕೆ ಕೊಡಬೇಕು? ಇದು ಸುಲಿಗೆಯಲ್ಲವೇ ಎಂದು ಪ್ರಶ್ನಿಸಿದ್ದಕ್ಕೆ ಶಾಸಕ ಜಿ.ಟಿ.ದೇವೇಗೌಡರು ಹೇಳಿದ್ದಾರೆ ಎಂದು ಉತ್ತರಿಸಿದ್ದಾರೆ ಎನ್ನಲಾಗಿದೆ.
ಆದರೆ ಶಾಸಕ ಜಿ.ಟಿ.ದೇವೇಗೌಡರನ್ನು ಸಂಪರ್ಕಿಸಿದಾಗ ಅವರು ನನಗೆ ಆ ವಿಷಯ ಗೊತ್ತೇ ಇಲ್ಲ. 300ರೂ.ಮಾಡಿರುವುದು ನನಗೆ ತಿಳಿದಿಲ್ಲ. ನನ್ನ ಜೊತೆ ಆ ಕುರಿತು ಯಾರೂ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
100ರೂ.30ರೂ.ಗಳ ಜೊತೆ 300ರೂ.ಗಳ ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕೊರೋನಾ ಹೊಡೆತಕ್ಕೆ ಸಿಲುಕಿ ನಲುಗಿರುವವರಿಗೆ 300ರೂ.ಭಾರೀ ಹೆಚ್ಚಳವಾಗಿದ್ದು, ಇದು ಹಗಲು ದರೋಡೆಯಾಗಿದೆ. ಇದರ ಬದಲು ನಿರ್ಬಂಧವಿದ್ದರೆ ಎಷ್ಟೋ ಚೆನ್ನಾಗಿತ್ತು ಎಂದು ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Articles You Might Like

Share This Article