Friday, September 20, 2024
Homeರಾಷ್ಟ್ರೀಯ | Nationalತಿರುಪತಿ ಲಡ್ಡುವಿಗೆ ಪ್ರಾಣಿಗಳ ಕೊಬ್ಬು ಬಳಕೆ : ಸಿಎಂ ನಾಯ್ಡು ಸ್ಪೋಟಕ ಆರೋಪ

ತಿರುಪತಿ ಲಡ್ಡುವಿಗೆ ಪ್ರಾಣಿಗಳ ಕೊಬ್ಬು ಬಳಕೆ : ಸಿಎಂ ನಾಯ್ಡು ಸ್ಪೋಟಕ ಆರೋಪ

Chandrababu Naidu accuses Jagan regime of using animal fat in Tirupati Laddoos

ಅಮರಾವತಿ, ಸೆ.19 (ಪಿಟಿಐ) ಹಿಂದಿನ ವೈಎಸ್‌‍ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ತಿರುಪತಿ ಲಡ್ಡು ಪ್ರಸಾದವನ್ನು ತಿರುಪತಿಯ ಪೂಜ್ಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ನೀಡಲಾಗುತ್ತದೆ, ಇದನ್ನು ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಅಡಿಯಲಲ್ಲಿ (ಟಿಟಿಡಿ) ನಡೆಸುತ್ತದೆ.ಅವರು ತುಪ್ಪದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಬಳಸಿದ್ದಾರೆ ಎಂದು ಸಿಎಂ ನಾಯು ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ.

ನಮ ಸರ್ಕಾರ ಬಂದ ಮೇಲೆ ಈಗ ಶುದ್ಧ ತುಪ್ಪವನ್ನು ಬಳಸಲಾಗುತ್ತಿದೆ ಮತ್ತು ದೇವಸ್ಥಾನದಲ್ಲಿ ಎಲ್ಲವನ್ನೂ ಶುದ್ಧೀಕರಿಸಲಾಗಿದೆ, ಇದು ಸುಧಾರಿತ ಗುಣಮಟ್ಟಕ್ಕೆ ಕಾರಣವಾಗುತ್ತದೆ ಎಂದು ಸಿಎಂ ಪ್ರತಿಪಾದಿಸಿದರು.

ಹಿರಿಯ ವೈಎಸ್‌‍ಆರ್‌ಸಿಪಿ ನಾಯಕ ಮತ್ತು ಮಾಜಿ ಟಿಟಿಡಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ನಾಯ್ಡು ಅವರ ಆರೋಪವನ್ನು ದುರುದ್ದೇಶಪೂರಿತ ಎಂದು ಬಣ್ಣಿಸಿದ್ದಾರೆ ಮತ್ತು ಟಿಡಿಪಿ ನಾಯಕರು ರಾಜಕೀಯ ಲಾಭಕ್ಕಾಗಿ ಯಾವುದೇ ಹಂತಕ್ಕೆ ಇಳಿಯುತ್ತಾರೆ ಎಂದು ಹೇಳಿದರು.

ಆಂಧ್ರಪ್ರದೇಶದ ಐಟಿ ಇಲಾಖೆ ಸಚಿವ ನಾರಾ ಲೋಕೇಶ್‌ ಕೂಡ ಈ ವಿಷಯದ ಬಗ್ಗೆ ಮಾತನಾಡಿ ಜಗನ್‌ ಮೋಹನ್‌ ರೆಡ್ಡಿ ಆಡಳಿತಾವಧಿಯನ್ನು ಗುರಿಯಾಗಿಸಿ,ಟೀಕಾಪ್ರಹಾರ ನಡೆಸಿದ್ದಾರೆ.

ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯವು ನಮ ಅತ್ಯಂತ ಪವಿತ್ರವಾದ ದೇವಾಲಯವಾಗಿದೆ. ವೈಎಸ್‌‍ ಜಗನ್‌ ಮೋಹನ್‌ ರೆಡ್ಡಿ ಆಡಳಿತವು ತಿರುಪತಿ ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿದೆ ಎಂದು ತಿಳಿದು ನನಗೆ ಆಘಾತವಾಗಿದೆ, ಇದನ್ನು ನಮ ಸರ್ಕಾರ ಗಂಬೀರವಾಗಿ ಪರಿಗಣಿಸಿದೆ ಎಂದು ಹೇಳಿದರು

RELATED ARTICLES

Latest News