Friday, November 22, 2024
Homeರಾಷ್ಟ್ರೀಯ | Nationalದಕ್ಷಿಣ ಭಾರತದ ಜನರು ಹೆಚ್ಚು ಮಕ್ಕಳನ್ನು ಮಾಡಿಕೊಳ್ಳುವಂತೆ ಆಂಧ್ರ ಸಿಎಂ ನಾಯ್ಡು ಕರೆ

ದಕ್ಷಿಣ ಭಾರತದ ಜನರು ಹೆಚ್ಚು ಮಕ್ಕಳನ್ನು ಮಾಡಿಕೊಳ್ಳುವಂತೆ ಆಂಧ್ರ ಸಿಎಂ ನಾಯ್ಡು ಕರೆ

Chandrababu Naidu's 'more kids' mantra for aging southern states

ಅಮರಾವತಿ,ಅ.20- ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ. ವಯಸ್ಸಾದವರ ಸಂಖ್ಯೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು.

ಜನಸಂಖ್ಯೆ ನಿರ್ವಹಣೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಹೇಳಿದ್ದಾರೆ. ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ನಾಯ್ಡು ತಿಳಿಸಿದ್ದಾರೆ.

2ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸದಂತೆ ರಾಜ್ಯವು ಈ ಹಿಂದೆ ಕಾನೂನನ್ನು ಅಂಗೀಕರಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಆ ಕಾನೂನನ್ನು ರದ್ದುಗೊಳಿಸಿದ್ದೇವೆ.

ಈಗ ಅದನ್ನು ಹಿಂತೆಗೆದುಕೊಳ್ಳಲು ನಾವು ಪರಿಗಣಿಸುತ್ತಿದ್ದೇವೆ. ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಸರ್ಕಾರವು ಹೆಚ್ಚಿನ ಪ್ರಯೋಜನಗಳನ್ನು ಒದಗಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

RELATED ARTICLES

Latest News