ಚಂದ್ರಶೇಖರ್ ಸಾವಿನ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ : ಆರಗ ಜ್ಞಾನೇಂದ್ರ

Social Share

ಬೆಂಗಳೂರು,ನ.7- ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸೋದರನ ಪುತ್ರನ ಸಾವಿನ ಪ್ರಕರಣವನ್ನು ಪೊಲೀಸರು ನಿಷ್ಪಕ್ಷಪಾತವಾಗಿ ಎಲ್ಲ ಆಯಾಮಗಳಿಂದಲೂ ತನಿಖೆ ಮಾಡುತ್ತಿದ್ದಾರೆ. ಭಾವೋದ್ವೇಗಕ್ಕೆ ಒಳಗಾಗುವುದು ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಕುಟುಂಬದ ಸದಸ್ಯರನ್ನು ಕಳೆದುಕೊಂಡಾಗ ಆಗುವ ದುಃಖ ಎಂಥದ್ದು ಎಂಬುದು ನನಗೂ ಗೊತ್ತು. ಭಾವೋದ್ವೇಗಕ್ಕೊಳಗಾಗಿ ಮಾತನಾಡುವುದರಲ್ಲಿ ಅರ್ಥವಿಲ್ಲ. ತನಿಖಾ ವರದಿ ಬರುವವರೆಗೂ ತಾಳ್ಮೆಯಿಂದ ಇರಬೇಕು ಎಂದು ಸಲಹೆ ಮಾಡಿದರು.

ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸುವುದು ಬೇಡ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಖುದ್ದು ನಾನೇ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ಪೊಲೀಸರಿಗೆ ಸೂಚನೆ ಕೊಟ್ಟಿದ್ದೇವೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ. ವರದಿ ಬಂದಾಗ ಸತ್ಯಾಂಶ ಬಯಲಾಗುತ್ತದೆ ಎಂದು ಹೇಳಿದರು.

ಮುರುಗಾ ಶರಣರ ಪೋಕ್ಸ್ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಸಂಗತಿಗಳು ಬಹಿರಂಗ..!

ರೇಣುಕಾಚಾರ್ಯ ಅವರು ಸಚಿವರಾಗಿ, ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕೆಲಸ ಮಾಡಿರುವ ಅನುಭವವಿದೆ. ತನ್ನ ಸಹೋದರನ ಪುತ್ರ ಏಕಾಏಕಿ ಸಾವನ್ನಪ್ಪಿದಾಗ ದುಃಖವಾಗುವುದು ಸಹಜ. ಆದರೆ ತನಿಖಾ ತಂಡದ ಮೇಲೆಯೇ ಅನುಮಾನ ವ್ಯಕ್ತಪಡಿಸುವುದು ಬೇಡ. ಪೊಲೀಸರು ವೈಜ್ಞಾನಿಕ ತಳಹದಿಯ ಮೇಲೆ ಅತ್ಯಂತ ನಿಖರವಾಗಿ ತನಿಖೆ ಮಾಡುತ್ತಾರೆ ಎಂದರು.

ಮಗ ತೀರಿಕೊಂಡಾಗ ಸಹಜವಾಗಿಯೇ ಭಾವಕರಾಗಿದ್ದಾರೆ. ನಾನು ಅವರ ಮನೆಗೆ ಭೇಟಿ ಕೊಟ್ಟಿದ್ದೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಪೊಲೀಸರು ಪ್ರಾಮಾಣಿಕವಾಗಿ ತನಿಖೆ ಮಾಡುತ್ತಿದ್ದಾರೆ. ಮರಣೋತ್ತರ ಪರೀಕ್ಷಾ ವರದಿ ಬರಬೇಕು ಎಂದು ಹೇಳಿದರು.

ಪೊಲೀಸರು ಯಾವುದನ್ನೂ ಮುಚ್ಚಿಡುತ್ತಿಲ್ಲ. ಇದರಿಂದ ಯಾರಿಗೇನೂ ಪ್ರಯೋಜನ ಇದೆ ಹೇಳಿ? ಯಡಿಯೂರಪ್ಪನವರೂ ಭೇಟಿ ಕೊಟ್ಟಿದ್ದಾರೆ. ಮುಖ್ಯಮಂತ್ರಿಗಳು ಸಹ ಅವರ ಮನೆಗೆ ಭೇಟಿ ಕೊಡಲಿದ್ದಾರೆ ಎಂದರು.

ಮೈಸೂರು-ಚೆನ್ನೈ ವಂದೇ ಭಾರತ್ ರೈಲು ಟ್ರಯಲ್ ರನ್ ಆರಂಭ

ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಅವರು, ಸ್ವಾಮೀಜಿಯವರ ಡೆತ್‍ನೋಟ್‍ನಲ್ಲಿ ಪ್ರಭಾವಿಗಳ ಹೆಸರು ಉಲ್ಲೇಖವಾಗಿರುವುದರಿಂದ ಎಲ್ಲಾ ರೀತಿಯಿಂದಲೂ ಪ್ರಕರಣವನ್ನು ಆಳವಾಗಿ ತನಿಖೆ ನಡೆಸಲಾಗುತ್ತಿದೆ. ತನಿಖೆಯಿಂದ ಎಲ್ಲವೂ ಹೊರಗೆ ಬರುತ್ತೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Articles You Might Like

Share This Article