ಬೆಂಗಳೂರು, ಜ.18- ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿ ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮಾ ಕಂಬಾರ (76) ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ ಅವರು ಜ.3ರಂದು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ 9.30ಕ್ಕೆ ಕತ್ರಿಗುಪ್ಪೆಯ ಸಿರಿಸಂಪಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
