ಬೆಂಗಳೂರು,ಜು.13- ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್ ಹೈಕಮಾಂಡ್‌ನ ಬಲಾ-ಬಲವನ್ನು ಪರೀಕ್ಷೆ ಒಳಪಡಿಸಲಿದ್ದು, ಸಹಜವಾಗಿಯೇ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರುವ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸುರ್ಜೇವಾಲ ನಡೆಸುತ್ತಿರುವ ಸರಣಿ ಸಭೆಗಳು ತೀವ್ರ ಕುತೂಹಲ ಕೆರಳಿಸಿವೆ. ಸಚಿವ ಸಂಪುಟ ಪುನರ್ ರಚನೆ, ನಿಗಮ ಮಂಡಳಿಗಳ ನೇಮಕಾತಿ ಸೇರಿದಂತೆ ಹಲವಾರು ವಿಚಾರಗಳಲ್ಲಿ ಈವರೆಗೂ ಹೈಕಮಾಂಡ್‌ನ ಪ್ರಭಾವ ಎದ್ದುಕಾಣುತ್ತಿದೆ.
ಒಂದು ವೇಳೆ ಬಿಹಾರದ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದಾದರೆ ಸಿದ್ದರಾಮಯ್ಯ ಅವರು ಹೆಚ್ಚು ಪ್ರಭಾವಿಯಾಗಲಿದ್ದು, ಡಿ.ಕೆ. ಶಿವಕುಮಾರ್ ಬಣಕ್ಕೆ ಮತ್ತಷ್ಟು ಹಿನ್ನಡೆಯಾಗುವ ನಿರೀಕ್ಷೆಯಿದೆ.ರಾಷ್ಟ್ರ ರಾಜಕಾರಣದ ನಾಯಕತ್ವದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿಯೇ ಹೈಕಮಾಂಡ್ ಎಂಬ ರೀತಿ ಬಿಂಬಿತವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೆಪ ಮಾತ್ರಕ್ಕೆ ಅಧ್ಯಕ್ಷರು ಎಂಬಂತೆ ರಾಜ್ಯದಲ್ಲಿ ಕೆಲ ನಾಯಕರು ವರ್ತಿಸುತ್ತಿದ್ದಾರೆ.
ನಾಯಕತ್ವದ ಕುರಿತು ಚರ್ಚೆಯಲ್ಲಿ ಯಾರೂ ಹಸ್ತಕ್ಷೇಪ ಮಾಡಬಾರದು ಎಂದು ಮಲ್ಲಿಕಾರ್ಜುನ್ ಖರ್ಗೆಯವರೇ ಹೇಳಿಕೆ ನೀಡಿದ ಬಳಿಕವೂ, ಪದೇಪದೇ ಬೆಂಕಿ ಬಿರುಗಾಳಿಯಂಥ ಮಾತುಗಳನ್ನಾಡುತ್ತಾ ಸರ್ಕಾರ ಮತ್ತು ಪಕ್ಷದಲ್ಲಿ ಕೆಲವರು ಗೊಂದಲ ಸೃಷ್ಟಿಸುತ್ತಲೇ ಇದ್ದಾರೆ. ಅಂಥವರ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗದೆ ಕಾಂಗ್ರೆಸ್‌ನ ಹಿರಿಯ ನಾಯಕರು ಕೈ-ಕೈ ಹಿಸುಕಿಕೊಳ್ಳುತ್ತಿದ್ದಾರೆ.
ಎಐಸಿಸಿಯಲ್ಲಿ ರಾಹುಲ್‌ಗಾಂಧಿ ಪ್ರಭಾವಿ ನಾಯಕರಾಗಿದ್ದು, ಅವರ ಬೆಂಬಲಿತ ನಾಯಕತ್ವಕ್ಕೆ ಹೆಚ್ಚಿನ ಬೆಂಬಲ ದೊರೆಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಗೊಂದಲ ಮೂಡಿಸುತ್ತಿದ್ದರೂ ಸಿದ್ದರಾಮಯ್ಯ ಅವರ ಬೆಂಬಲಿಗರಿಗೆ ಯಾವುದೇ ಕ್ರಮಗಳಾಗುತ್ತಿಲ್ಲ. ಸಂಪುಟದಲ್ಲಿ ಹಲವಾರು ಸಚಿವರು ಸೆಪ್ಟಂಬರ್ ಕ್ರಾಂತಿ ಸೇರಿದಂತೆ ಅನೇಕ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ.
ಅವರ ವಿರುದ್ಧ ಸಣ್ಣ ಮಟ್ಟದ ಗದರಿಕೆಗಳೂ ಕೇಳಿಬಂದಿಲ್ಲ. ಅದೇ ಡಿ.ಕೆ. ಶಿವಕುಮಾರ್ ಪರವಾಗಿ ಮಾತನಾಡಿದವರಿಗೆೆ ನೋಟೀಸ್ ನೀಡಲಾಗಿದೆ. ಈ ರೀತಿಯ ತಾರತಮ್ಯಗಳು ಪಕ್ಷದಲ್ಲಿ ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿವೆ.
ಹೈಕಮಾಂಡ್‌ನಲ್ಲಿ ಪ್ರಾಬಲ್ಯ ಹೆಚ್ಚಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಅವರ ಬೆಂಬಲಿಗರು ಮನಸ್ಸಿಗೆ ಬಂದಂತೆ ಎಂಬ ಟೀಕೆಗಳಿವೆ.ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಥವಾ ಅದರ ಮಿತ್ರಕೂಟ ಸರ್ಕಾರ ರಚಿಸಿದ್ದಾದರೆ ರಾಹುಲ್‌ಗಾಂಧಿ ಅವರ ನಾಯಕತ್ವಕ್ಕೆ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ಉಳಿಯುತ್ತದೆ. ಈ ವರೆಗೂ ನಡೆದಿರುವ ಲೋಕಸಭೆ ಹಾಗೂ ವಿವಿಧ ರಾಜ್ಯದ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ತೀವ್ರ ಹಿನ್ನಡೆ ಅನುಭವಿಸಿದೆ.
ರಾಹುಲ್ ಗಾಂಧಿಯವರನ್ನು ಸೋಲಿನ ನಾಯಕ ಎಂದು ಬಿಂಬಿಸಲಾಗಿದೆ. ಬಹುತೇಕ ಅವರ ಪ್ರಾಬಲ್ಯ ತಗ್ಗಿದ ಹೊತ್ತಿನಲ್ಲಿ 2023ರ ಲೋಕಸಭೆ ಚುನಾವಣೆ ವಿರೋಧ ಪಕ್ಷ ನಾಯಕನನ್ನು ಘೋಷಿಸುವಷ್ಟು ಸಾಮರ್ಥ್ಯಗಳಿಸಿಕೊಂಡಿದ್ದಾರೆೆ. ಹೀಗಾಗಿ ರಾಹುಲ್‌ಗಾಂಧಿ ಪುಟಿದೆದ್ದಿದ್ದರು. ಹೈಕಮಾಂಡ್‌ನಲ್ಲಿ ಮತ್ತೆ ಪ್ರಭಾವಿಯಾಗಿ ಮುಂದುವರೆದಿದ್ದಾರೆ.
ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದೆ ಇದ್ದರೆ ರಾಹುಲ್‌ಗಾಂಧಿ ಅವರ ನಾಯಕತ್ವಕ್ಕೆ ಹಿನ್ನಡೆಯಾಗಲಿದೆ. ಅನಂತರ ರಾಹುಲ್‌ಗಾಂಧಿ ಅವರನ್ನೇ ಹೈಕಮಾಂಡ್‌ನ ನಾಯಕತ್ವದಲ್ಲಿ ಮುಂಚೂಣಿಯಲ್ಲಿಡಬೇಕೆ ಅಥವಾ ಪ್ರಿಯಾಂಕ ಗಾಂಧಿ ಅವರನ್ನು ಮುನ್ನೆಲೆಗೆ ತರಬೇಕೆ ಎನ್ನುವ ಬಗ್ಗೆ ಚರ್ಚೆಗಳು ಶುರುವಾಗಲಿವೆ.ಈ ಹಿನ್ನೆಲೆಯಲ್ಲಿ ಪ್ರಿಯಾಂಕಗಾಂಧಿ ಭವಿಷ್ಯದ ಕಾಂಗ್ರೆಸ್ಸಿನ ಪ್ರಭಾವಿ ನಾಯಕಿಯಾಗುವ ಸಾಧ್ಯತೆಯಿದೆ.
ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಅವರು ರಾಹುಲ್‌ಗಾಂಧಿ ಅಥವಾ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗದೇ ಪ್ರಿಯಾಂಕ ಗಾಂಧೀ ಅವರನ್ನು ಭೇಟಿಯಾಗಿದ್ದು, ಈ ಎಲ್ಲಾ ಚರ್ಚೆಗಳಿಗೆ ಪುಷ್ಟಿ ನೀಡಿದಂತಾಗದೆ. ಒಂದು ವೇಳೆ ನಿರೀಕ್ಷೆಯಂತೆ ಬಿಹಾರದ ಫಲಿತಾಂಶ ಕಾಂಗ್ರೆಸ್ ಪರವಾಗಿ ಬಂದರೆ ಸಿದ್ದರಾಮಯ್ಯ ಅವರ ಬಣಕ್ಕೆ ರಾಜ್ಯದಲ್ಲಿ ಹೆಚ್ಚಿನ ಬಲಬಂದಂತಾಗುತ್ತದೆ. ಬಿಹಾರದ ಚುನಾವಣೆ ಫಲಿತಾಂಶ ನಿರೀಕ್ಷೆ ಹುಸಿ ಮಾಡಿದರೆ ಡಿ.ಕೆ. ಶಿವಕುಮಾರ್ ಅವರ ಬಣದ ಕೈಮೇಲಾಗಲಿದೆ.
- ಪೊಲೀಸ್ ಕಸ್ಟಡಿ ಸಾವು ವಿರೋಧಿಸಿ ಬೀದಿಗಿಳಿದ ವಿಜಯ್
- ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರ ಆತ್ಮಹತ್ಯೆ
- ಬೆಳಗಾವಿ : ನಡು ರಸ್ತೆಯಲ್ಲೇ ಯುವ ಗಾಯಕನ ಬರ್ಬರ ಹತ್ಯೆ
- ಕಿರು ತೆರೆ ನಟಿ ಶ್ರುತಿ ಮೇಲಿನ ಹಲ್ಲೆಗೆ ನೈಜ ಕಾರಣ ಬಿಚ್ಚಿಟ್ಟ ಪತಿ
- ಬಿಹಾರ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ..!