Monday, October 21, 2024
Homeರಾಜ್ಯಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ : ಇಂದೇ ಎನ್‌ಡಿಎ ಅಭ್ಯರ್ಥಿ ಘೋಷಣೆ..?

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ : ಇಂದೇ ಎನ್‌ಡಿಎ ಅಭ್ಯರ್ಥಿ ಘೋಷಣೆ..?

Channapatna assembly by-election: NDA candidate announcement today..?

ಮಂಡ್ಯ, ಅ.20- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯನ್ನು ಇಂದು ಸಂಜೆ ವೇಳೆಗೆ ಘೋಷಣೆ ಮಾಡಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ನಮ ಪಕ್ಷದ ಪರವಾಗಿ ನಿರ್ಧಾರ ಮಾಡಬೇಕು. ಅದೇ ನಿಟ್ಟಿನಲ್ಲಿ ಚರ್ಚೆಯಾಗುತ್ತಿದ್ದು, ಇಂದು ಸಭೆ ನಡೆಸಿದ ಬಳಿಕ ಅಭ್ಯರ್ಥಿ ಘೋಷಣೆ ಆಗುತ್ತದೆ ಎಂದು ಹೇಳಿದರು,

ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ವಿಚಾರದಲ್ಲಿ ಗೊಂದಲವೇನು ಇಲ್ಲ. ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಸಹ ಸ್ಪರ್ಧೆ ಮಾಡಬೇಕು ಎಂಬ ಅಪೇಕ್ಷೆ ಹೊಂದಿದ್ದಾರೆ. ನ್ಯಾಯಯುತ ಚರ್ಚೆ ಮಾಡುವುದಾದರೆ ನಮಗೆ ಚನ್ನಪಟ್ಟಣ ಬಿಟ್ಟುಕೊಡಬೇಕು. ಉಪ ಚುನಾವಣೆ ನಡೆಯುವ ಮೂರು ಕ್ಷೇತ್ರಗಳ ಪೈಕಿ 2 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ ಎಂದರು.

ಚನ್ನಪಟ್ಟಣವನ್ನು ಜೆಡಿಎಸ್‌‍ ಬಿಟ್ಟಿದೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಹೋರಾಟ ಮಾಡದೇ ಸನ್ಯಾಸತ್ವ ಸ್ವೀಕಾರ ಮಾಡಿದ್ದೇವೆಯೇ? ನಾವು ಚುನಾವಣೆ ಗೆಲ್ಲಲು ಏನು ನಿರ್ಧಾರ ಮಾಡಬೇಕು ಅದನ್ನು ಮಾಡುತ್ತೇವೆ ಎಂದು ತಿರುಗೇಟು ನೀಡಿದರು.

ಮಾಜಿ ಸಂಸದ ಡಿ.ಕೆ.ಸುರೇಶ್‌ ಸಂಸ್ಕೃತಿಯ ಬಗ್ಗೆ ನಾನು ಮಾತನಾಡುವುದಿಲ್ಲ. ಅವರು ಏನೇ ಚರ್ಚೆ ಮಾಡಿದರೂ ನನಗೆ ಸಂಬಂಧ ಇಲ್ಲ. ಜನರು ಬಹುನಿರೀಕ್ಷೆ ಇಟ್ಟು ಕಾಂಗ್ರೆಸ್‌‍ಗೆ ಬಹುಮತ ನೀಡಿದ್ದಾರೆ. ಕಾಂಗ್ರೆಸ್‌‍ಗೆ 136 ಸೀಟ್‌ಗಳನ್ನು ಕೊಟ್ಟಿರುವುದು ನಿಜ. ಆದರೆ, ಕಾಂಗ್ರೆಸ್‌‍ ರಾಜ್ಯದಲ್ಲಿ ಯಾವ ರೀತಿ ಕೆಲಸ ಮಾಡುತ್ತಿದೆ. ಪ್ರತಿ ದಿನವೂ ಒಂದೊಂದು ಅಕ್ರಮಗಳು ಬೆಳಕಿಗೆ ಬರುತ್ತಿವೆ ಎಂದು ಅವರು ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಅವರು ನನಗೆ ಮಣ್ಣಿನ ಮೇಲೆ ಆಸೆ ಇಲ್ಲವೆಂದು ಪದೇ ಪದೆ ಹೇಳುತ್ತಾರೆ. ಕಾಂಗ್ರೆಸ್‌‍ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ, ಮುಂದೆ ಏನು ಬೇಕಾದರೂ ಆಗಬಹುದಾಗಿದೆ ಎಂದರು.

ಬಹುಮತದ ಸರ್ಕಾರದ ವಿಶ್ವಾಸ: ನನಗೆ ಐದು ವರ್ಷದ ಪೂರ್ಣ ಬಹುಮತದ ಸರ್ಕಾರ ಜನರು ನೀಡಬಹುದು ಎಂಬ ವಿಶ್ವಾಸ ಹೊಂದಿರುವುದಾಗಿ ತಿಳಿಸಿದ ಕುಮಾರಸ್ವಾಮಿ ಅವರು, ನಾನು ವಿಶ್ವಾಸ ಇಟ್ಟುಕೊಳ್ಳಲು ಅವರ ಅನುಮತಿ ಪಡೆಯಬೇಕಾ? ಎಂದು ಪ್ರಶ್ನಿಸಿದರು.

5 ವರ್ಷದ ಸರ್ಕಾರ ಬಂದರೆ, ಆಗ ನನ್ನದೇ ಆದ ಅಭಿವೃದ್ಧಿ ಕೆಲಸಗಳು ಇವೆ. ಜನರ ಸಮಸ್ಯೆ ಬಗೆಹರಿಸಲು ಕಾರ್ಯಕ್ರಮ ಹಾಕಿಕೊಂಡಿದ್ದೇನೆ. ನಮ ರಾಜ್ಯದಲ್ಲಿ ಹಣದ ಕೊರತೆ ಇಲ್ಲ. ಕರ್ನಾಟಕ ಸಂಪತ್ತುಭರಿತವಾದ ರಾಜ್ಯ. ಈಗ ಸರ್ಕಾರದ ದುಡ್ಡು ಪೋಲು ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಿ ಜನರ ನೆಮದಿ ಬದುಕಿಗಾಗಿ ನನಗೆ ಅವಕಾಶ ನೀಡುತ್ತಾರೆ ಎನ್ನುವುದು ತಪ್ಪಾ? ನನ್ನ ಮಾತಿನಲ್ಲಿ ಮತ್ತು ತೀರ್ಮಾನದಲ್ಲೂ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಸ್ತೆ ಅಭಿವೃದ್ದಿಗೆ ಈ ಭಾಗದ ಜನರು ನಿರೀಕ್ಷೆ ಇಟ್ಟುಕೊಂಡಿದ್ದರು. 45 ಕೋಟಿ ರೂ. ವೆಚ್ಚದಲ್ಲಿ 11.98 ವೆಚ್ಚದಲ್ಲಿ ರಸ್ತೆ ಅಭಿವೃದ್ದಿಗೆ ಆಗುತ್ತಿದೆ. ಇಂದು 99 ಕೋಟಿ ರೂ ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಚಾಲನೆ ಕೊಟ್ಟಿದ್ದೇನೆ. ಜನರ ಬೇಡಿಕೆಯನ್ನು ಹಂತ ಹಂತವಾಗಿ ಈಡೇರಿಸುವ ಪ್ರಯತ್ನ ಮಾಡುತ್ತೇನೆ. ದೇಶದ ಹಲವು ಕಡೆ ಪ್ರವಾಸ ಮಾಡಿದ್ದೇನೆ. ಆದರೆ, ನನ್ನ ಮನಸ್ಸೆಲ್ಲ ಮಂಡ್ಯ ಕಡೆಯೇ ಇರುತ್ತದೆ .

ಸಣ್ಣ ಸಮಸ್ಯೆಯಾದರೂ ಅಧಿಕಾರಿಗಳ ಜೊತೆ ತಕ್ಷಣ ಸಮಾಲೋಚನೆ ಮಾಡುತ್ತೇನೆ. ಶಿಕ್ಷಣಕ್ಕೆ ನಮ ಇಲಾಖೆಯಿಂದಲೂ ಹೆಚ್ಚಿನ ಆದ್ಯತೆ ಕೊಡುತ್ತೇನೆ. ಸಿಎಸ್‌‍ಆರ್‌ ಫಂಡ್‌, ಎಂಪಿ ಫಂಡ್‌ ಮೂಲಕ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ರಾಜ್ಯದ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತ್ತಿಕರಣ ಮಾಡುತ್ತೇವೆ. ರಾಜ್ಯ ಸರ್ಕಾರ ಭೂಮಿ ಕಳೆದುಕೊಳ್ಳುವ ರೈತರಿಗೆ ಸರಿಯಾದ ಬೆಲೆ ಕೊಡಬೇಕು. ಅಭಿವೃದ್ಧಿ ಹೆಸರಿನಲ್ಲಿ ರೈತರಿಗೆ ಅನಾನುಕೂಲ ಆಗಬಾರದು. ನಿಮ ಜೊತೆ ನಾವು ಇದ್ದೇವೆ ಎಂದು ಅವರು ಜನರಿಗೆ ಭರವಸೆ ಕೊಟ್ಟರು.

RELATED ARTICLES

Latest News