ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಚದುರಂಗದಾಟ ಶುರು

ಬೆಂಗಳೂರು,ಜೂ.19- ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ತಮ್ಮ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ಷೇತ್ರದ ವಿವಿಧ ದೇವಾಲಯಗಳಿಗೆ ಭೇಟಿ ನೀಡುವ ನೆಪದಲ್ಲಿ ಜನರ ನಾಡಿಮಿಡಿತ ಅರಿಯುತ್ತಿದ್ದಾರೆ. ಉಪಚುನಾವಣೆಯಲ್ಲಿ ಯಾರನ್ನು ಸ್ಪರ್ಧೆಗಿಳಿಸಿದರೆ ಗೆಲುವು ಸಾಧ್ಯ ಎಂಬ ಬಗ್ಗೆ ಜನರ ಅಭಿಪ್ರಾಯವನ್ನು ಕಲೆ ಹಾಕುತ್ತಿದ್ದಾರೆ. ಜೆಡಿಎಸ್‌‍ ಕೂಡ ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸುತ್ತಿದೆ. … Continue reading ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಚದುರಂಗದಾಟ ಶುರು