ಚಂದ್ರಶೇಖರ ಗುರೂಜಿ ಕೊಲೆ ಕೇಸ್ : 800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

Social Share

ಹುಬ್ಬಳ್ಳಿ,ಅ.6- ಸರಳ ವಾಸ್ತು ಕಂಪನಿಯ ಸಂಸ್ಥಾಪಕ, ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ತನಿಖಾಕಾರಿಗಳು ಹಂತಕರಿಬ್ಬರ ವಿರುದ್ಧ ಜೆಎಂಎಫ್ಸಿ ಕೋರ್ಟ್ನಲ್ಲಿ ಸುಮಾರು 800ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.

ಗುರೂಜಿ ಹತ್ಯೆಗೆ ಸಂಬಂಧಿಸಿ ಪೊಲೀಸರು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕು ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಗುರೂಜಿ ಅವರನ್ನು ಹಂತಕರಿಬ್ಬರು ಜು. 5ರಂದು ಇಲ್ಲಿನ ಉಣಕಲ್ಲ ಕೆರೆ ಬಳಿಯ ಹೊಟೇಲೊಂ ದರಲ್ಲಿ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದರು.

ಘಟನೆ ನಡೆದ 4 ತಾಸಿನೊಳಗೆ ಪೊಲೀಸರು ಹಂತಕರನ್ನು ರಾಮದುರ್ಗ ಬಳಿ ಸಿನಿಮೀಯ ರೀತಿಯಲ್ಲಿ ಅಡ್ಡಗಟ್ಟಿ ವಶಕ್ಕೆ ಪಡೆದಿದ್ದರು. ಪ್ರಕರಣಕ್ಕೆ ಸಂಬಂಧಿಸಿ ತನಿಖಾಕಾರಿಗಳು ಬಂಧಿತರ ವಿರುದ್ಧ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳು ಸಹಿತ ಕೊಲೆಗೆ ಸಂಬಂಧಿಸಿದ ಇನ್ನಿತರ ವಿಷಯಗಳ ಕುರಿತು ಕಲೆ ಹಾಕಲಾದ ಮಾಹಿತಿ ಹಾಗೂ ಸಂಗ್ರಹಿಸಿದ ಸಾಕ್ಷಿಗಳು ಸೇರಿ 800ಕ್ಕೂ ಹೆಚ್ಚು ಪುಟಗಳುಳ್ಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳಿಂದ ಮಾಹಿತಿ ತಿಳಿದುಬಂದಿದೆ.

ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಎಸಿಪಿ ವಿನೋದ ಮುಕ್ತೇದಾರ ನೇತೃತ್ವದಲ್ಲಿ ಐದು ತನಿಖಾ ತಂಡ ರಚಿಸಿದ್ದರು.

ಆತಂಕ ಮೂಡಿತ್ತು:

ಇನ್ನು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರುಜಿ ಕೊಲೆ ಪ್ರಕರಣ ಸಾಕಷ್ಟು ಆತಂಕ ಮೂಡಿಸಿತ್ತು. ಕೋಟ್ಯಾಂತರ ಆಸ್ರಿ ಮಾಡಿದ್ದ ಶ್ರೀ ಚಂದ್ರಶೇಖರ ಗುರುಜಿ ತನ್ನದೇ ಶಿಷ್ಯ ಬಳಗದ ಜೊತೆಗೆ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಕಿರಿಕ್ ಸಹ ಮಾಡಿಕೊಂಡಿದ್ದರು.

Articles You Might Like

Share This Article