ಬಿಜಾಪುರ (ಛತ್ತೀಸ್‌ಗಢ), ಜೂ.22- ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಇಬ್ಬರು ಗ್ರಾಮಸ್ಥರನ್ನು ಹತ್ಯೆ ಮಾಡಿದ್ದಾರೆ. ಪಮೇದ್ ಪೊಲೀಸ್ ಠಾಣೆ ವ್ಯಾಪ್ತಿಯ ಸೆಂದ್ರಾಬೋರ್ ಮತ್ತು ಏಂಪುರ ಗ್ರಾಮಗಳಲ್ಲಿ ಇಬ್ಬರು ಅಮಾಯಕ ಗ್ರಾಮಸ್ಥರನ್ನು ನಕ್ಸಲರು ಕ್ರೂರವಾಗಿ ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ತಮಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೆ ಕಾರಣ ಮತ್ತು ಅಪರಾಧ ಯಾವಾಗ ನಡೆಯಿತು ಎಂಬುದನ್ನು ಪತ್ತೆ ಹಚ್ಚಲು ತನಿಖೆ ಮುಂದುವರೆದಿದೆ. ಘಟನೆಗೆ ನಕ್ಸಲರು ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ತಿಳಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಛತ್ತೀಸ್‌ಗಢಕ್ಕೆ ಭೇಟಿ ನೀಡುವ ಮುನ್ನ ಈ ಘಟನೆ ನಡೆದಿದೆ. ಶಾ ಎರಡು ದಿನಗಳ ಭೇಟಿಗಾಗಿ ಭಾನುವಾರ ಮಧ್ಯಾಹ್ನ ರಾಯ್‌ಪುರ ತಲುಪಲಿದ್ದಾರೆ. ಜೂನ್ 17 ರಂದು, ಬಿಜಾಪುರ ಜಿಲ್ಲೆಯ ಪೆದ್ದಕೋಮಾರ್ ಬಿಜಾಪುರ ಗ್ರಾಮದಲ್ಲಿ 13 ವರ್ಷದ ಬಾಲಕ ಸೇರಿದಂತೆ ಮೂವರು ಗ್ರಾಮಸ್ಥರನ್ನು ನಕ್ಸಲರು ಹಗ್ಗದಿಂದ ಕತ್ತು ಹಿಸುಕಿ ಕೊಂದಿದ್ದಾರೆ.
ಮೃತ ಮೂವರಲ್ಲಿ ಇಬ್ಬರು ಹಿರಿಯ ಮಾವೋವಾದಿ ಕೇಡರ್ ದಿನೇಶ್ ಮೋದಿಯಂ ಅವರ ಸಂಬಂಧಿಕರಾಗಿದ್ದು, ಈ ವರ್ಷದ ಮಾರ್ಚ್ ನಲ್ಲಿ ಅವರು ಪೊಲೀಸರ ಮುಂದೆ ಶರಣಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ನಕ್ಸಲ್ ಚಟುವಟಿಕೆಗಳು ತಗ್ಗಿವೆ ಎಂದು ಅಮಿತ್ ಶಾ ಪದೇ ಪದೇ ಹೇಳಿಕೊಳ್ಳುತ್ತಿದ್ದಾರೆ. ಅವರಿಗೆ ತಿರುಗೇಟು ನೀಡುವ ಸಲುವಾಗಿಯೇ ಈ ದಾಳಿ ನಡೆಸಿರುವುದಾಗಿ ಕಂಡು ಬರುತ್ತಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
- ಮದುವೆಯಾಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
- ಉದ್ಯಮಿಯನ್ನು ಕಟ್ಟಿ ಹಾಕಿ ಚಿನ್ನ,ಹಣ ಲೂಟಿ
- ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಹೊಣೆ : ಸಿಎಂ ಸ್ಪಷ್ಟನೆ
- ಉದ್ಧಟತನ ತೋರುವ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಡಿಕೆಶಿಗೆ ‘ಕೈ’ಕಮಾಂಡ್ ಸೂಚನೆ
- ಒಬ್ಬ ಮಹಿಳೆಯೊಂದಿಗೆ ಇಬ್ಬರು ಪುರುಷರ ಮದುವೆ : ಹಿಮಾಚಲದಲ್ಲಿ ಮರುಜೀವ ಪಡೆದ ಬಹುಪತಿತ್ವ