Sunday, April 28, 2024
Homeರಾಷ್ಟ್ರೀಯಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಆರು ನಕ್ಸಲರ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಆರು ನಕ್ಸಲರ ಎನ್‌ಕೌಂಟರ್‌

ಬಿಜಾಪುರ, ಮಾ.27 (ಪಿಟಿಐ) : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ ನಲ್ಲಿ ಮಹಿಳಾ ಕೇಡರ್ ಸೇರಿದಂತೆ ಆರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಸಗುಡ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕುರಭಟ್ಟಿ ಮತ್ತು ಪುಸ್ಬಾಕ ಗ್ರಾಮಗಳ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜï) ಸುಂದರರಾಜ್ ಪಿಟಿಐಗೆ ತಿಳಿಸಿದರು.

ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್, ಸೆಂಟ್ರಲ್ ರಿಸರ್ವ್ ಪೊಲೀಸ್ -ಫೋರ್ಸ್ ಮತ್ತು ಅದರ ಗಣ್ಯ ಘಟಕ ಕಮಾಂಡೋ ಬೆಟಾಲಿಯನ್ -ಫಾರ್ ರೆಸಲ್ಯೂಟ್ ಆಕ್ಷನ್ಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಗುಂಡಿನ ಚಕಮಕಿ ನಿಲ್ಲಿಸಿದ ನಂತರ, ಮಹಿಳೆ ಸೇರಿದಂತೆ ಆರು ನಕ್ಸಲೀಯರ ಶವಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು. ಬಿಜಾಪುರ ಜಿಲ್ಲೆಯು ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯಲಿದೆ

RELATED ARTICLES

Latest News