ಬಿಬಿಎಂಪಿ ಆಯುಕ್ತರ ನಡೆಗೆ ಸಾರ್ವಜನಿಕರ ಆಕ್ರೋಶ

ಬೆಂಗಳೂರು, ಮೇ 21- ಜನ ಸಾಮಾನ್ಯರಿಗೆ ಸ್ಪಂದಿಸದ ಬಿಬಿಎಂಪಿ ಮುಖ್ಯ ಆಯುಕ್ತರ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ನಿವೃತ್ತ ಸರ್ಕಾರಿ ಅಧಿಕಾರಿ ಸಮಸ್ಯೆಗೆ ತೀವ್ರವಾಗಿ ಸ್ಪಂದಿಸುವ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸಾರ್ವಜನಿಕ ಸಮಸ್ಯೆಯನ್ನು ನಿರ್ಲಕ್ಷಿಸುತ್ತಾರೆ ಎಂದು ಟ್ವಿಟರ್‍ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಎಚ್‍ಎಎಲ್ ಎರಡನೇ ಹಂತದಲ್ಲಿ ಫುಟ್‍ಪಾತ್, ಡ್ರೈನೇಜ್ ಸೇರಿದಂತೆ ವಿವಿಧ ಸಮಸ್ಯೆಗಳಿದ್ದವು. ನಿವೃತ್ತ ಮುಖ್ಯಕಾರ್ಯದರ್ಶಿ ರವೀಂದ್ರ ವಾಸವಿದ್ದ ಪ್ರದೇಶದ ಸಮಸ್ಯೆಯನ್ನು ಅವರು ಗಮನಕ್ಕೆ ತಂದ ಕೂಡಲೇ ಮುಖ್ಯ ಆಯುಕ್ತರು ಸ್ಥಳ ಪರಿಶೀಲನೆ ನಡೆಸಿ ಸ್ಥಳದಿಂದಲೇ ಅಧಿಕಾರಿಗಳಿಗೆ ಕರೆ ಮಾಡಿ ದುರಸ್ತಿ ಮಾಡುವಂತೆ ಸೂಚನೆ ನೀಡಿದರು.

ಆದರೆ, ಈ ಪ್ರದೇಶದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಈ ಕಡೆ ಗಮನ ಹರಿಸದೆ ನಿರ್ಲಕ್ಷ್ಯವಹಿಸಿದರು ಎಂದು ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸದರಲ್ಲದೆ, ಕೇವಲ ಅಧಿಕಾರಿಗಳು ಸೂಚಿಸುವ ಸಮಸ್ಯೆಗಳಿಗೆ ಮಾತ್ರ ಆದ್ಯತೆ ನೀಡುವ ಮುಖ್ಯ ಆಯುಕ್ತರು ಸಾರ್ವಜನಿಕರ ಸಮಸ್ಯೆಗಳತ್ತಲೂ ಗಮನ ಹರಿಸಿ ಎಂದು ಹೇಳಿದ್ದಾರೆ.