ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಳೆ ಅಧಿಕಾರ ಸ್ವೀಕಾರ

Social Share

ಬೆಂಗಳೂರು,ಅ.15- ರಾಜ್ಯ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಅವರು ಅಧಿಕಾರ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಿ.ಬಿ.ವರಳೆ ಅವರಿಗೆ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು.

ಅ.11ರಂದು ಪಿ.ಬಿ.ಹೊರಳೆ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು. ಬಾಂಬೆ ಹೈಕೋರ್ಟ್‍ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಅವರು, ಕೆಲವು ಮಹತ್ವದ ತೀರ್ಪುಗಳನ್ನು ಗಮನ ಸೆಳೆದಿದ್ದರು.

ಮಹಾರಾಷ್ಟ್ರದ ನಿಪಾನಿ ಎಂಬಲ್ಲಿ ಜನಿಸಿದ್ದ ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮರಾಠ ವಿವಿಯಲ್ಲಿ ಕಾನೂನು ಪದವಿ ಪಡೆದು ಹಿರಿಯ ವಕೀಲ ಎಸ್.ಎನ್.ಲೋಹಿಯ ಬಳಿ ಸಹಾಯಕರಾಗಿ ವೃತ್ತಿ ಜೀವನವನ್ನು ಆರಂಭವಿಸಿದರು.

ನಂತರ ಔರಂಗಬಾದ್ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ನಂತರ ಬಾಂಬ್ ಹೈಕೋರ್ಟ್‍ನ ಔರಂಗಬಾದ್ ಪೀಠದಲ್ಲಿ ಮಹಾರಾಷ್ಟ್ರ ಸರ್ಕಾರದ ಸಹಾಯಕ ಅಭಿಯೋಜಕ, 2008ರಲ್ಲಿ ಬಾಂಬೆ ಹೈಕೋರ್ಟ್‍ನ ನ್ಯಾಯಾೀಧಿಶರಾಗಿ ನೇಮಕವಾಗಿದ್ದರು.

ಹಾಲಿ ಹೈಕೋರ್ಟ್ ನ್ಯಾಯಮೂರ್ತಿ ಅಭಯ್.ಎಸ್ ಓಕಾ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಮುಂಬಡ್ತಿ ಪಡೆದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಪಿ.ಬಿ.ವರಳೆ ಅವರನ್ನು ನೇಮಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತಿತರರು ಉಪಸ್ಥಿತರಿದ್ದರು.

Articles You Might Like

Share This Article