ನವದೆಹಲಿ,ಫೆ.12- ಗುಜರಾತ್, ರಾಜಸ್ಥಾಮ ಸೇರಿ ನಾಲ್ಕು ಹೈಕೋರ್ಟ್‍ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಲಾಗಿದೆ. ಕಾನೂನು ಸಚಿವ ಕಿರಣ್ ರಿಜಿಜು ಅವರು ಇಂದು ಟ್ವಿಟರ್‍ನಲ್ಲಿ ಹೊಸ ನೇಮಕಾತಿಗಳನ್ನು ಪ್ರಕಟಿಸಿದ್ದಾರೆ. ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಸೋನಿಯಾ ಗಿರಿಧರ್ ಗೋಕಣಿ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ. ಹಿಂದಿನ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂಕೋರ್ಟ್‍ಗೆ ಬಡ್ತಿ ನೀಡಲಾಗಿತ್ತು.
ತೀವ್ರ ಸ್ವರೂಪಕ್ಕೆ ತಿರುಗಿದ ಇಸ್ರೇಲಿಗಳ ಪ್ರತಿಭಟನೆ
ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನು ಗೌಹಾಟಿ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ, ಒರಿಸ್ಸಾ ಹೈಕೋರ್ಟ್ ನ್ಯಾಯಮೂರ್ತಿ ಜಸ್ವಂತ್ ಸಿಂಗ್‍ರನ್ನು ತ್ರಿಪುರಾ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಗಿದೆ.
ಲೋಕ್ ಅದಾಲತ್ ನಲ್ಲಿ ಒಂದಾದ ವಿಚ್ಛೇದನಕ್ಕೆ ಮುಂದಾಗಿದ್ದ 14 ದಂಪತಿಗಳು
ಗೌಹಾಟಿ ಹೈಕೋರ್ಟ್‍ನ ನ್ಯಾಯಮೂರ್ತಿ ಎನ್.ಕೋಟೀಶ್ವರ್ ಸಿಂಗ್‍ರನ್ನು ಜಮ್ಮು ಕಾಶ್ಮೀರ ಮತ್ತು ಲಡಾಕ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ.
Chief, Justices, Appointed, 4 High Courts,