ಬೆಂಗಳೂರು,ಅ.2- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರಾದ ಎಂಟಿಬಿ ನಾಗರಾಜು, ಗೋವಿಂದ ಕಾರಜೋಳ ಅವರು ಇಂದು ಬೆಂಗಳೂರಿನ ಗಾಂಧಿ ಭವನದ ಬಳಿ ಇರುವ ಖಾದಿ ಎಂಪೋರಿಯಂನಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸಿದರು.
ಸಂಕಷ್ಟದಲ್ಲಿರುವ ಖಾದಿ ಮತ್ತು ಗ್ರಾಮೋದ್ಯೋಗ ಸಂಘ-ಸಂಸ್ಥೆಗಳಿಗೆ ಆರ್ಥಿಕ ಬಲ ನೀಡಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಖಾದಿ ಭಂಡಾರಗಳಿಗೆ ಭೇಟಿ ನೀಡಿ ಖಾದಿ ಮತ್ತು ಗ್ರಾಮೋದ್ಯೋಗ ಉತ್ಪನ್ನಗಳನ್ನು ಖರೀದಿಸುವಂತೆ ಮುಖ್ಯಮಂತ್ರಿ ಸೇರಿದಂತೆ ಎಲ್ಲ ಶಾಸಕರಿಗೆ ಸಚಿವ ಎಂಟಿಬಿ ನಾಗರಾಜ್ ಪತ್ರ ಬರೆದಿದ್ದರು.
ಸಚಿವರು ಸ್ವತಃ ತಾವೇ ಅದಕ್ಕೆ ಮೇಲ್ಪಂಕ್ತಿ ಹಾಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರ ಸಚಿವರುಗಳನ್ನು ಕರೆದೊಯ್ದು ಖಾದಿ ಉತ್ಪನ್ನಗಳನ್ನು ಖರೀದಿಸಿದರು.