Friday, February 23, 2024
Homeಜಿಲ್ಲಾ ಸುದ್ದಿಗಳುಚಿಕ್ಕಬಳ್ಳಾಪುರದಲ್ಲಿ ವೈದ್ಯರಿಗೆ ಕೊರೊನಾ

ಚಿಕ್ಕಬಳ್ಳಾಪುರದಲ್ಲಿ ವೈದ್ಯರಿಗೆ ಕೊರೊನಾ

ಚಿಕ್ಕಬಳ್ಳಾಪುರ, ಡಿ.24- ಕೊರೊನಾ ಹೊಸ ಅಲೆಯಲ್ಲಿ ಇಲ್ಲಿನ ಖಾಸಗಿ ವೈದ್ಯರೊಬ್ಬರಿಗೆ ಕೊರೊನಾ ಸೋಂಕು ದೃಢಟ್ಟಿದ್ದು, ಹೊಸ ಅಲೆಯಲ್ಲಿ ಇದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೇ ಮೊದಲ ಪ್ರಕರಣವಾಗಿದೆ. ಕೆಲಸದ ನಿಮಿತ್ತ ಅವರು ಇತ್ತೀಚಿಗೆ ದೆಹಲಿ ಮತ್ತು ತಮಿಳುನಾಡಿಗೆ ಪ್ರಯಾಣ ಬೆಳೆಸಿದ್ದರು. ಪ್ರವಾಸದಿಂದ ವಾಪಸ್ ಬಂದ ನಂತರ ಜ್ವರ ಕಾಣಿಸಿಕೊಂಡಿತ್ತು. ಜ್ವರ ತೀವ್ರಗೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಯಾವುದೇ ತೀವ್ರತರ ರೋಗದ ಲಕ್ಷಣಗಳು ಇಲ್ಲದ ಕಾರಣ ಮನೆಯಲ್ಲಿಯೇ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಮನೆಯವರಿಗೆ ಕೊರೊನಾ ಪರಿಚಯ ಮಾಡಲಾಗಿದೆ. ಯಾವುದೇ ಸೋಂಕು ಇದುವರೆಗೂ ಪತ್ತೆಯಾಗಿಲ್ಲ. ಎಲ್ಲರಿಗೂ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ. ಇನ್ನು ಜಿಲ್ಲೆಯಲ್ಲಿಯೇ ಇದು ಮೊದಲ ಪ್ರಕರಣವಾಗಿ ಪತ್ತೆಯಾದ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊರೊನಾ ಚಿಕಿತ್ಸೆಗೆ ಜಿಲ್ಲೆಯಾದ್ಯಂತ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅದರಂತೆ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ 10 ಹಾಸಿಗೆಗಳನ್ನು ಕೊರೊನಾ ಚಿಕಿತ್ಸೆಗೆ ಮೀಸಲೀಡಲು ಸೂಚಿಸಲಾಗಿದ್ದು, ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದಲ್ಲಿ 17 ಐಸೊಲೇಷನ್ ಹಾಗೂ 7 ಐಸಿಯು ಹಾಸಿಗೆಗಳನ್ನು ಮೀಸಲಿಡಲಾಗಿದೆ.

ಉಪನ್ಯಾಸದ ವೇಳೆಯಲ್ಲೇ ಹೃದಯಾಘಾತ ಹಿರಿಯ ಉಪನ್ಯಾಸಕ ನಿಧನ

ಪ್ರತಿನಿತ್ಯ ಕೊರೊನಾ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಅದೇ ರೀತಿ ಜಿಲ್ಲೆಯ ಜನತೆಯು ಸಹ ಜಾಗರೂಕತೆಯಿಂದ ನಿಯಮಗಳನ್ನು ಪಾಲಿಸಬೇಕು. ಬಹು ಮುಖ್ಯವಾಗಿ 60 ವರ್ಷ ಮೇಲ್ಪಟ್ಟ ಎಲ್ಲರೂ ಮಾಸ್ಕ್ ಧರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು. ನಾಳೆ ಕ್ರಿಸ್‍ಮಸ್ ಹಬ್ಬದ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಹಬ್ಬ ಆಚರಣೆ ಮಾಡಬೇಕು. ಪ್ರತಿಯೊಬ್ಬರೂ ಈ ಬಗ್ಗೆ ಜಾಗೃತರಾಗಿರಬೇಕು ಎಂದು ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಈಸಂಜೆ ಪ್ರತಿನಿಧಿಗೆ ಮಾಹಿತಿ ನೀಡಿ ಮನವಿ ಮಾಡಿದರು.

ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದಲ್ಲಿ ಜಾಗೃತಿ: ಇನ್ನು ಜಿಲ್ಲೆಯ ಜಿಲ್ಲಾ ಕೇಂದ್ರವೂ ಸೇರಿದಂತೆ ತಾಲೂಕಿನ ಅತ್ಯಂತ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಸಾರ್ವಜನಿಕರಿಗೆ ಈಗಾಗಲೇ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ವಿವಿಧ ಕಡೆಗಳ ವ್ಯಾಪ್ತಿಗಳಲ್ಲಿ ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದ್ದು, ಸಾರ್ವಜನಿಕರು ಸಹ ಹೆಚ್ಚಿನ ಜನಸಂದಣಿ ಇರುವ ಕಡೆಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಬಹುಮುಖ್ಯವಾಗಿ ವಯಸ್ಸಾದವರು ಮತ್ತು ಬಿಪಿ ಶುಗರ್ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೊರೊನಾ ನಿಗ್ರಹಕ್ಕೆ ಸಹಕರಿಸಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಮಂಜುಳಾ ಸಾರ್ವಜನಿಕರಲ್ಲಿ ಮನವಿ ಮಾಡಿದರು.

RELATED ARTICLES

Latest News