ಹೊಸ ವರ್ಷಾಚರಣೆ: ನಂದಿಬೆಟ್ಟಕ್ಕೆ ಹರಿದುಬಂದ ಜನಸಾಗರ

Social Share

ಚಿಕ್ಕಬಳ್ಳಾಪುರ, ಜ.1- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಜನಸಾಗರವೇ ಹರಿದು ಬಂದಿತ್ತು. ವರ್ಷದ ಆರಂಭದ ದಿನ ಹಾಗೂ ಭಾನುವಾರವಾಗಿದ್ದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ನಂದಿಬೆಟ್ಟಕ್ಕೆ ಜನ ಮರಳೋ ಜಾತ್ರೆ ಮರಳೋ ಎಂಬಂತೆ ತಂಡೋಪತಂಡವಾಗಿ ಆಗಮಿಸಿದ್ದರು.

ನಂದಿ ಬೆಟ್ಟದಲ್ಲಿ ರಾತ್ರಿಯ ಸಂಭ್ರಮಾಚರಣೆಗೆ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾ ಆಡಳಿತ ನಿಷೇಧ ಹೇರಿದ್ದು, ಇಂದು ಬೆಳಿಗ್ಗೆ 6 ಗಂಟೆಗೆ ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿದ ಹಿನ್ನೆಲೆಯಲ್ಲಿ ತಡರಾತ್ರಿಯಿಂದಲೇ ನಂದಿಬೆಟ್ಟಕ್ಕೆ ಆಗಮಿಸಲು ಕಾದು ಕುಳಿತಿದ್ದವರು ನಾ ಮುಂದು ತಾ ಮುಂದು ಎಂದು ದೌಡಾಯಿಸುತ್ತಿದ್ದುದು ಕಂಡುಬಂತು.

ನಂದಿಬೆಟ್ಟದ ಕೆಳಭಾಗದಲ್ಲಿ ಸುಮಾರು 6 ಕಿಮೀನಷ್ಟು ಸಂಚಾರ ದಟ್ಟಣೆ ಉಂಟಾಗಿತ್ತು. ಬೆಟ್ಟದ ಮೇಲ್ಭಾಗಕ್ಕೆ ತೆರಳಲು ಹಾಗೂ ಬೆಟ್ಟ ಇಳಿಯಲು ಆಗದೆ ಕೆಲವು ಪ್ರವಾಸಿಗರ ಪರದಾಡುವಂತಾಗಿತ್ತು. ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರ ಹರಸಾಹಸ ಪಟ್ಟರು.

ನಾಡಿನಾದ್ಯಂತ ದೇವಾಲಯಗಳಿಗೆ ಭಕ್ತರ ದಂಡು

ನಂದಿ ಗಿರಿಧಾಮದ ಪರಿಸರ, ಪಾವಿತ್ರ್ಯತೆ ಕಾಪಾಡಲು, ಸಾರ್ವಜನಿಕರಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡದಂತೆ ತಡೆಗಟ್ಟುವ ಮುಂಜಾಗ್ರತಾ ಕ್ರಮಕ್ಕಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರವಾಸಿಗರು ಆ ದಿನ ನಂದಿ ಗಿರಿಧಾಮಕ್ಕೆ ಬಂದು ಗುಂಪು-ಗುಂಪಾಗಿ ತಿರುಗಾಡುವುದು, ಮದ್ಯಪಾನ ಮಾಡುವುದು, ಪ್ಲಾಸ್ಟಿಕ್ ಬಾಟಲ್‍ಗಳನ್ನು ಎಸೆಯುವುದರಿಂದಾಗಿ ಪರಿಸರ ಮಾಲಿನ್ಯ ಉಂಟಾಗುತ್ತದೆ.

ಟ್ರಕ್‍ಗೆ ಬೈಕ್ ಡಿಕ್ಕಿ: ಪೊಲೀಸ್ ಸೇರಿ ಇಬ್ಬರು ಸಾವು

ಆದ್ದರಿಂದ ಇದನ್ನು ತಡೆಗಟ್ಟುವ ಸಲುವಾಗಿ ನಂದಿ ಗಿರಿಧಾಮದಲ್ಲಿ 2022ರ ಡಿ.31ರ ಸಂಜೆ 6 ಗಂಟೆಯಿಂದ 2023ರ ಜನವರಿ 1ರ ಬೆಳಿಗ್ಗೆ 6 ಗಂಟೆವರೆಗೆ ಸಾರ್ವಜನಿಕರಿಗೆ ನಿಷೇಧಾಜ್ಞೆ ವಿಧಿಸಿ ಆದೇಶಿಸಲಾಗಿತ್ತು. ಸಂಜೆ 6 ಗಂಟೆ ನಂತರ ಪ್ರವಾಸಿಗರು ತಂಡೋಪತಂಡವಾಗಿ ತೆರಳಿ ಪ್ರಕೃತಿ ಸೌಂದರ್ಯ ಸವಿದರು.

Chikkaballapur, Nandi Betta, New Year, celebrations,

Articles You Might Like

Share This Article