ಖಾಸಗಿ ಬಸ್ ಪಲ್ಟಿ : 40 ಮಂದಿಗೆ ಗಾಯ, 6 ಮಂದಿ ಸ್ಥಿತಿ ಗಂಭೀರ

Social Share

ಚಿಕ್ಕಬಳ್ಳಾಪುರ,ನ.20- ಚಾಲಕನ ನಿರ್ಲಕ್ಷ್ಯದಿಂದ ಖಾಸಗಿ ಬಸ್ ಕಾಲುವೆಗೆ ಉರುಳಿಬಿದ್ದ ಪರಿಣಾಮ 40ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಅಮಿಟಾಗಾನಹಳ್ಳಿ ಗೇಟ್ ಬಳಿ ನಡೆದಿದೆ.

ಗಾಯಗೊಂಡವರಲ್ಲಿ ಆರು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. 40ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಖಾಸಗಿ ಬಸ್ ಹಿಂದೂಪುರ ತಿರುಪತಿ ಮಾರ್ಗವಾಗಿ ಬರುತ್ತಿತ್ತು.

3ನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಪಂಚರತ್ನ ರಥಯಾತ್ರೆ

ಅಮಿಟಾಗಾನಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದಿದೆ. ಆರು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಶಾಸಕ ಎಂ.ಕೃಷ್ಣಾರೆಡ್ಡಿ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಮಂಗಳೂರು ಆಟೋ ಸ್ಪೋಟ ಆಕಸ್ಮಿಕವಲ್ಲ, ಭಯೋತ್ಪಾದನಾ ಕೃತ್ಯ

ಚಾಲಕ ಮೊಬೈಲ್‍ನಲ್ಲಿ ಮಾತನಾಡುತ್ತಾ ಬಸ್ ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

accident, bus, chikkaballapur, 40 injured, ಅಪಘಾತ, ಚಿಕ್ಕಬಳ್ಳಾಪು, ಬಸ್,

Articles You Might Like

Share This Article