Sunday, September 15, 2024
Homeಜಿಲ್ಲಾ ಸುದ್ದಿಗಳು | District Newsಚಿಕ್ಕಬಳ್ಳಾಪುರ | Chikkaballapurಚಿಕ್ಕಬಳ್ಳಾಪುರ : ಟಿಟಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರ ಸಾವು

ಚಿಕ್ಕಬಳ್ಳಾಪುರ : ಟಿಟಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರ ಸಾವು

Chikkaballapur: Three killed in collision between a TT and a car

ಚಿಕ್ಕಬಳ್ಳಾಪುರ,ಆ.29- ಟಿಟಿ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 12 ಮಂದಿ ಗಾಯಗೊಂಡಿರುವ ಘಟನೆ ಗ್ರಾಮಾಂತರ ಪೊಲೀಸ್‌‍ ಠಾಣಾ ವ್ಯಾಪ್ತಿಯ ದಂಡುಪಾಳ್ಯಗೇಟ್‌ ಬಳಿ ನಡೆದಿದೆ.

ನೆಲ್ಲೂರು ಜಿಲ್ಲೆಯ ಶ್ರೀಕಾಂತ್‌, ಶ್ರೀನಿವಾಸಲು ಹಾಗೂ ಪುಷ್ಪ ಮೃತಪಟ್ಟ ದುರ್ದೈವಿಗಳು. ಟಿಟಿ ವಾಹನ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ತೆರಳುತ್ತಿದ್ದು, ಬೆಂಗಳೂರಿನಿಂದ ಕಡಪ ಹೈವೇ ಮುಖಾಂತರ ಆಂಧ್ರ ಪ್ರದೇಶದ ಕಡೆಗೆ ತೆರಳುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

ಟಿಟಿ ವಾಹನದಲ್ಲಿದ್ದ 12 ಮಂದಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸುದ್ದಿ ತಿಳಿದ ಕೂಡಲೇ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಕುಶಾಲ್‌ ಚೌಕ್ಸೆ, ಎಸ್‌‍ಪಿ ರಾಜಾ ಖಾಸಿಂ, ಡಿವೈಎಸ್ಪಿ ಮುರಳೀಧರ್‌, ಸಿಪಿಐ ಶಿವರಾಜ್‌ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

RELATED ARTICLES

Latest News