ಚಿಕ್ಕಮಗಳೂರು, ಜು.26- ಅನಾರೋಗ್ಯದ ಸಮಸ್ಯೆ ಹಿನ್ನೆಲೆ ಗುಪ್ತಚರ ಇಲಾಖೆಯ ಕಾನ್‌ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ.ಮಧು(28) ಮೃತಪಟ್ಟ ಕಾನ್‌ಸ್ಟೇಬಲ್.
ಮೂಲತಃ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಮಧು ಕಳೆದೊಂದು ವರ್ಷದಿಂದ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಒಂದು ತಿಂಗಳ ಹಿಂದಷ್ಟೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು. ತಮ್ಮ ಮನೆಯಲ್ಲೇ ಅನಾರೋಗ್ಯದ ಸಮಸ್ಯೆ ಎಂದು ಚೀಟಿ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಪೊಲೀಸರ ವೈಫಲ್ಯವೇ ದುರಂತಕ್ಕೆ ಕಾರಣ : ರೇವಣ್ಣ ಆಕ್ರೋಶ
- ಮೊಸಳೆಹೊಸಹಳ್ಳಿ ದುರಂತ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕು
- ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಎಫ್ಐಆರ್ ಅನಿವಾರ್ಯ : ಸಿಎಂ
- ಗಣೇಶೋತ್ಸವ ದುರಂತ : 9 ಜನರನ್ನು ಬಲಿಪಡೆದ ಟ್ರಕ್ ಚಾಲಕನ ವಿಚಾರಣೆ
- ಹಾಸನ ಗಣೇಶೋತ್ಸವ ದುರಂತ : 10 ಲಕ್ಷ ಪರಿಹಾರಕ್ಕೆ ಅಶೋಕ್ ಆಗ್ರಹ