ಚಿಕ್ಕಮಗಳೂರು,ಡಿ.3- ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿರುವ ಶಾಸಕ ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ ವೇಳೆ ಬಿಜೆಪಿ ಕಾರ್ಯಕರ್ತರ ಪ್ರತಿರೋಧದಿಂದಾಗಿ ಉದ್ರಿಕ್ತ ವಾತಾವರಣ ನಿರ್ಮಾಣವಾದ ಘಟನೆ ಇಲ್ಲಿ ನಡೆದಿದೆ.
ಇತ್ತೀಚೆಗೆ ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಿದ್ದರಾಮಯ್ಯ ಅವರನ್ನು ಸಿದ್ರಮುಲ್ಲಾಖಾನ್ ಎಂದು ಸಂಬೋಸಿದ್ದು, ಒಂದು ವೇಳೆ ಮತ್ತೆ ಅವರು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂದುಗಳ ಹತ್ಯೆ ಹೆಚ್ಚಾಗಲಿದೆ ಎಂದು ಟೀಕಿಸಿದ್ದರು.
ಇದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಇಂದು ಪ್ರತಿಭಟನೆ ಹಮ್ಮಿಕೊಂಡಿತ್ತು. ತಾಲ್ಲೂಕು ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಹೊರಟು ಬಸನವನಹಳ್ಳಿ ಮುಖ್ಯರಸ್ತೆಯಲ್ಲಿರುವ ಸಿ.ಟಿ.ರವಿ ಅವರ ಮನೆಗೆ ಮುತ್ತಿಗೆ ಹಾಕಲು ಕಾರ್ಯಕ್ರಮ ನಿಗದಿಯಾಗಿತ್ತು. ಇದಕ್ಕಾಗಿ ಜಿಲ್ಲಾ ಪೊಲೀಸರಿಂದ ಅನುಮತಿಯನ್ನು ಪಡೆಯಲಾಗಿತ್ತು.
ನಿಗದಿತ ಕಾರ್ಯಕ್ರಮದಂತೆ ಕಾಂಗ್ರೆಸಿಗರು ಪ್ರತಿಭಟನಾ ಮೆರವಣಿಗೆ ಹೊರಟಾಗ ಏಕಾಏಕಿ ಬಿಜೆಪಿಯ ನೂರಕ್ಕೂ ಹೆಚ್ಚು ಕಾರ್ಯಕರ್ತರು ಧ್ವಜಗಳನ್ನು ಹಿಡಿದು ಎದುರಾದರು. ಈ ಅನಿರೀಕ್ಷಿತ ಘಟನೆಯಿಂದ ಪೊಲೀಸರು ಕೆಲ ಕಾಲ ಗೊಂದಲಕ್ಕೊಳಗಾದರು.
500ಕೆಜಿ ನಿಷೇಧಿತ ಪ್ಲಾಸ್ಟಿಕ್ ಸೀಜ್, 34 ಸಾವಿರ ರೂ.ದಂಡ
ಬಿಜೆಪಿ ಕಾರ್ಯಕರ್ತರಿಗೆ ಅನುಮತಿ ನೀಡಲಾಗಿಲ್ಲ. ಹೀಗಾಗಿ ಮೆರವಣಿಗೆ ಮಾಡಲು ಅವಕಾಶವಿಲ್ಲ ಎಂದು ಹೇಳಿ ಅವರನ್ನು ಅರ್ಧದಲ್ಲೇ ತಡೆದರು. ಇತ್ತ ಕಾಂಗ್ರೆಸ್ ಮೆರವಣಿಗೆ ಸಮೀಪಕ್ಕೆ ಬಂದಿತ್ತು. ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ 100 ಮೀಟರ್ ಅಂತರದಲ್ಲಿ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿತ್ತು.
ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ.ರವಿ ವಿರುದ್ಧ ಧಿಕ್ಕಾರ ಕೂಗುತ್ತಾ ಮೆರವಣಿಗೆ ಮುಂದುವರೆಸಲು ಯತ್ನಿಸಿದಾಗ ಬಿಜೆಪಿ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರನ್ನು ನಿಂದಿಸಿ ಕಲ್ಲಿನಿಂದ ಹಲ್ಲೆ ನಡೆಸಲು ಯತ್ನಿಸಿದರು ಎಂದು ದೂರಲಾಗಿದೆ. ಇದರಿಂದ ಉದ್ರಿಕ್ತ ವಾತಾವರಣ ನಿರ್ಮಾಣವಾಯಿತು. ಪೊಲೀಸರು ಕಾಂಗ್ರೆಸಿಗರನ್ನು ತಡೆದು, ಬಿಜೆಪಿಗರನ್ನು ದೂರ ಕಳುಹಿಸಿ, ಕಾಂಗ್ರೆಸ್ನ ನಾಲ್ಕು ನಾಯಕರಿಗೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಭಾಷಣ ಮಾಡಲು ಅವಕಾಶ ಮಾಡಿಕೊಟ್ಟರು.
ಸುಂದರ್ ಪಿಚೈಗೆ ಅಮೆರಿಕಾದಲ್ಲಿ ಪದ್ಮಭೂಷಣ ಪ್ರದಾನ
ನಂತರ ಕೆಪಿಸಿಸಿ ರಾಜ್ಯ ವಕ್ತಾರ ಎಚ್.ಎಚ್.ದೇವರಾಜ್ ಭಾಷಣ ಮಾಡವ ವೇಳೆಗೆ ಸ್ಥಳಕ್ಕಾಗಮಿಸಿದ ಪೊಲೀಸ್ ಮುಖ್ಯಾಧಿಕಾರಿ ಉಮಾಪ್ರಕಾಶ್ ಭಾಷಣವನ್ನು ಮೊಟಕುಗೊಳಿಸುವಂತೆ ಸೂಚಿಸಿದ್ದಲ್ಲದೆ, ಕಾಂಗ್ರೆಸ್ ನಾಯಕರನ್ನು ವಶಕ್ಕೆ ತೆಗೆದುಕೊಳ್ಳಲು ಆದೇಶಿಸಿದರು.
ಅದರಂತೆ ಪೊಲೀಸರು ಕಾಂಗ್ರೆಸಿಗರನ್ನು ವಶಪಡಿಸಿಕೊಳ್ಳಲು ಯತ್ನಿಸಿದಾಗ ಯುವ ಕಾಂಗ್ರೆಸಿಗರು ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ತಳ್ಳಾಟ-ನೂಕಾಟ ಸಂಭವಿಸಿತು. ಪೂರ್ವಾನುಮತಿ ಪಡೆಯದೇ ಇದ್ದರೂ ಬಿಜೆಪಿ ಕಾರ್ಯಕರ್ತರಿಗೆ ಮೆರವಣಿಗೆ ನಡೆಸಲು ಅವಕಾಶ ನೀಡಿದ್ದೇಕೆ ಎಂದು ಸ್ಥಳೀಯ ಪೊಲೀಸರನ್ನು ಎಸ್ಪಿ ತರಾಟೆಗೆ ತೆಗೆದುಕೊಂಡಿದ್ದಾರೆ.
ದತ್ತ ಜಯಂತಿಗೆ ಬಿಗಿ ಪೊಲೀಸ್ ಬಂದೋಬಸ್ತ್
ಹನುಮಜಯಂತಿ ಹಾಗೂ ದತ್ತಮಾಲಾ ಅಭಿಯಾನದ ಪ್ರಯುಕ್ತ ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ವೇಳೆ ಕೇಸರಿ ಶಾಲು ಧರಿಸಿದ್ದು ಬಿಜೆಪಿಗರನ್ನು ಕೆರಳಿಸಿತ್ತು. ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸಿಗರು, ಹಿಂದುತ್ವ ಬಿಜೆಪಿಗರ ಸ್ವತ್ತಲ್ಲ. ನಾವೂ ಕೂಡ ಹಿಂದುಗಳು ಎಂದು ಪ್ರತಿಕ್ರಿಯಿಸಿದ್ದಾರೆ.
Chikmagalur, CT Ravi, BJP, Congress,