ಮತದಾರರ ಮಾಹಿತಿಗೆ ಕನ್ನ : ಚಿಲುಮೆ ಸಂಸ್ಥೆ ಲೋಕೇಶನಿಗೆ ಪೊಲೀಸರ ಗ್ರಿಲ್

Social Share

ಬೆಂಗಳೂರು,ನ.18- ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಚಿಲುಮೆ ಸಂಸ್ಥೆಯ ಕೆ.ಎಂ.ಲೋಕೇಶ್ ಎಂಬುವವರನ್ನು ತೀವ್ರ ವಿಚಾರಣೆಗೊಳಪಡಿಸಲು ಪೊಲೀಸರು ತೀರ್ಮಾನಿಸಿದ್ದಾರೆ.

ಲೋಕೇಶ್ ಅವರಿಗೆ ನೋಟಿಸ್ ಜಾರಿ ಮಾಡಿ ಶೀಘ್ರದಲ್ಲೇ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲು ತೀರ್ಮಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ. ಮತದಾರರ ವೈಯಕ್ತಿಕ ಮಾಹಿತಿ ಕಳವು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದಂತೆ ಯಾವುದೇ ಅನುಮತಿ
ಇಲ್ಲದೆ ಇಂತಹ ಕಾರ್ಯಕ್ಕೆ ಕೈ ಹಾಕಿದ್ದ ಚಿಲುಮೆ ಸಂಸ್ಥೆ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ.

ಕಾಡುಗೋಡಿ ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಚಿಲುಮೆ ಶೈಕ್ಷಣಿಕ ಸಾಮಾಜಿಕ ಮತ್ತು ಸಾಂಸ್ಕøತಿಕ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಹಲವು ಷರತ್ತು ವಿಸಿ ಮತಗಟ್ಟೆ ಮಟ್ಟದ ಸಮನ್ವಯ ಅಧಿಕಾರಿ ಎಂಬ ಗುರುತಿನ ಚೀಟಿಯನ್ನು ಬಿಬಿಎಂಪಿಯಿಂದ ನೀಡಲಾಗಿತ್ತು.

ಮತದಾರರ ಪಟ್ಟಿಯಿಂದ ಸಾವಿರಾರು ಮಂದಿಯ ಹೆಸರು ನಾಪತ್ತೆ : ಚಿಲುಮೆ ಕೈವಾಡ ಶಂಕೆ

ಆದರೆ, ಚಿಲುಮೆ ಸಂಸ್ಥೆಯ ಲೋಕೇಶ್ ಎಂಬುವವರು ಮತಗಟ್ಟೆ ಮಟ್ಟದ ಅಧಿಕಾರಿಗಳ ಗುರುತಿನ ಚೀಟಿಯನ್ನು ದುರುಪಯೋಗ ಪಡಿಸಿಕೊಂಡು ಚಿಲುಮೆ ಸಂಸ್ಥೆಯ ಗುರುತಿನ ಚೀಟಿಯಲ್ಲಿ ಬಿಬಿಎಂಪಿಯಿಂದ ನೇಮಿಸಲಾದ ಬಿಎಲ್‍ಒಗಳೆಂದು ನಮೂದಿಸಿಕೊಂಡಿದ್ದರು.

ಬಿಎಲ್‍ಒಗಳೆಂದು ಗುರುತಿನ ಚೀಟಿ ಧರಿಸಿದ ಚಿಲುಮೆ ಸಂಸ್ಥೆಯ ಸಿಬ್ಬಂದಿಗಳು ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸದೆ ನೇರವಾಗಿ ತಾವೇ ಮನೆಗಳಿಗೆ ಹೋಗಿ ಮತದಾರರ ಮಾಹಿತಿ ಪಡೆಯುತ್ತಿದ್ದರು ಎಂದು ಕೆ.ಚಂದ್ರಶೇಖರ್ ಎಂಬುವವರು ಕಾಡುಗೋಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ದೂರಿನ ಆಧಾರದ ಮೇಲೆ ತನಿಖೆಯನ್ನು ತೀವ್ರಗೊಳಿಸಲಾಗಿದ್ದು, ಶೀಘ್ರ ಲೋಕೇಶ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನ.1ರಿಂದಲೇ ಪೂರ್ವಾನ್ವಯವಾಗುವಂತೆ ಮೀಸಲಾತಿ ಹೆಚ್ಚಳ ಜಾರಿ

ಅದೇ ರೀತಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ನೀಡಿರುವ ದೂರಿನ ಆಧಾರದ ಮೇಲೆ ನಾನಾ ಕೋನಗಳಲ್ಲಿ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.

Chilume, Lokesha, police, BBMP, voter, information,

Articles You Might Like

Share This Article