Tuesday, May 6, 2025
Homeರಾಷ್ಟ್ರೀಯ | Nationalಪಾಪಿಸ್ತಾನಕ್ಕೆ ಕಂತ್ರಿ ಬುದ್ದಿಯ ಚೀನಾ ಬೆಂಬಲ

ಪಾಪಿಸ್ತಾನಕ್ಕೆ ಕಂತ್ರಿ ಬುದ್ದಿಯ ಚೀನಾ ಬೆಂಬಲ

China's support for Pakistan

ಇಸ್ಲಾಮಾಬಾದ್‌, ಮೇ 6- ಭಾರತಕ್ಕೆ ಮಿತ್ರ ರಾಷ್ಟ್ರ ರಷ್ಯಾ ಬೆಂಬಲ ವ್ಯಕ್ತಪಡಿಸಿರುವ ಬೆನ್ನಲ್ಲೆ ಚೀನಾ ಪಾಕಿಸ್ತಾನಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದೆ. ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಬಿಗಡಾಯಿಸುವ ಪರಿಸ್ಥಿತಿ ಉಂಟಾಗಿದೆ. ಒಂದು ಕಡೆ ಭಾರತಕ್ಕೆ ರಷ್ಯಾ, ಜಪಾನ್‌ ಬೆಂಬಲಿ ನೀಡಿದರೆ, ಇನ್ನೊಂದು ಕಡೆ ನೆರೆ ರಾಷ್ಟ್ರ ಚೀನಾ ಪಾಕ್‌ಗೆ ಬೆಂಬಲ ನೀಡುವುದಾಗಿ ಹೇಳಿದೆ.

ದಕ್ಷಿಣ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗಾಗಿ ನಾವು ಸದಾ ಪಾಕಿಸ್ತಾನ ಬೆಂಬಲಿಸುತ್ತೇವೆ ಎಂದು ಚೀನಾ ಹೇಳಿಕೊಂಡಿದೆ ಎಂದು ಪಾಕ್‌ ಮಾಧ್ಯಮಗಳು ಬರೆದುಕೊಂಡಿವೆ.ಪಾಕ್‌ ಅಧ್ಯಕ್ಷ ಅಲಿ ಜರ್ದಾರಿ ಅವರನ್ನು ಪಾಕಿಸ್ತಾನದಲ್ಲಿನ ಚೀನಾ ರಾಯಭಾರಿ ಜಿಯಾಂಗ್‌ ಜೈಡಾಂಗ್‌ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಚೀನಾ ಮತ್ತು ಪಾಕಿಸ್ತಾನದ ಸ್ನೇಹ ಶಾಶ್ವತವಾಗಿದೆ.

ಕಾಲ ಕಾಲಕ್ಕೆ ಪರೀಕ್ಷೆಗೆ ಒಳಗಾಗಿದ್ದರೂ ಯಾವಾಗಲೂ ಸವಾಲಿನ ಸಮಯದಲ್ಲಿ ಪರಸ್ಪರ ಬೆಂಬಲಿಸಿದ ಸ್ನೇಹ ನಮ್ಮದಾಗಿದೆ. ಹೀಗಾಗಿ ದಕ್ಷಿಣ ಏಷ್ಯಾ ಶಾಂತಿಗಾಗಿ ಪಾಕ್‌ಗೆ ನಮ್ಮ ಬೆಂಬಲವಿದೆ ಎಂದಿದ್ದಾರೆ ಎಂದು ಜರ್ದಾರಿ ತಿಳಿಸಿದ್ದಾರೆ. ಪಾಕ್‌ ಬೆಂಬಲಿಸುವುದಾಗಿ ತಿಳಿಸಿ ಮಾತನಾಡಿದ ಜರ್ದಾರಿ, ಭಾರತವು ಬೇಜಾವಾಬ್ದಾರಿ ಮತ್ತು ಆಕ್ರಮಣಕಾರಿ ನಡೆಯನ್ನು ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

RELATED ARTICLES

Latest News