ಮುರುಗಾ ಶರಣರ ಪೋಕ್ಸ್ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಸಂಗತಿಗಳು ಬಹಿರಂಗ..!

Social Share

ಚಿತ್ರದುರ್ಗ,ನ.7- ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯವೆಸಗಿ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮಕ್ಕಳಿಗೆ ಹಣ್ಣಿನಲ್ಲಿ ಮತ್ತುಭರಿಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ.

ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ನ್ಯಾಯಾಲಯಕ್ಕೆ ತನಿಖಾ ತಂಡ ಸಲ್ಲಿಸಿರುವ 694 ಪುಟಗಳ ಚಾರ್ಜ್‍ಶೀಟ್‍ನಲ್ಲಿ ಮುರುಘಾ ಶರಣರ ವಿರುದ್ಧವೇ 374 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.

ತನಿಖಾ ತಂಡ ಮುಖ್ಯಾಧಿಕಾರಿ ಡಿವೈಎಸ್ಪಿ ಅನಿಲ್‍ಕುಮಾರ್ ನೇತೃತ್ವದ ತಂಡ ಚಿತ್ರದುರ್ಗದ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಬೆಚ್ಚಿಬೀಳಿಸುವ ಅಂಶಗಳು ಹೊರಬಿದ್ದಿವೆ.

BIG NEWS : ಆರ್ಥಿಕ ದುರ್ಬಲರಿಗೆ ಶೇ.10ರಷ್ಟು ಮೀಸಲಾತಿ ಎತ್ತಿಹಿಡಿದ ಸುಪ್ರೀಂ ಕೋರ್ಟ್

ಈ ಪ್ರಕರಣದಲ್ಲಿ ಮುರುಘಾಶ್ರೀಗಳು ಮೊದಲನೇ ಆರೋಪಿಯಾಗಿದ್ದು, 2ನೇ ಆರೋಪಿ, ಹಾಸ್ಟೆಲ್‍ನ ಮಹಿಳಾ ವಾರ್ಡನ್ ರಶ್ಮಿ , 3ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಉತ್ತರಾಧಿಕಾರಿ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಆದರೆ ವಕೀಲ ಗಂಗಾಧರಯ್ಯ ಇದರಲ್ಲಿ ಭಾಗಿಯಾಗಿರುವುದರ ಬಗ್ಗೆ ಚಾರ್ಜ್‍ಶೀಟ್‍ನಲ್ಲಿ ಎಲ್ಲೂ ಉಲ್ಲೇಖವಾಗಿಲ್ಲ.

ಕಳೆದ ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಸೆಕ್ಷನ್‍ಗಳಾದ 17, 5(ಎಲ್), 6 ಮತ್ತು ಭಾರತೀಯ ದಂಡ ಸಂಹಿತೆ ಸೆಕ್ಷನ್‍ಗಳಾದ 376(2)(ಎನ್), 376(3), 149ರಡಿ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಚಿತ್ರದುರ್ಗ ಗ್ರಾಮೀಣ ಠಾಣೆಗೆ ವರ್ಗಾಯಿಸಲಾಗಿತ್ತು.

ಇದರ ಜೊತೆಗೆ ಪೋಕ್ಸೊ ಕಾಯಿದೆ ಸೆಕ್ಷನ್‍ಗಳಾದ 17, 5(ಎಲ್), 6, ಐಪಿಸಿ ಸೆಕ್ಷನ್ 376(2)(ಎನ್), 376(3), 149 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿರ್ಮೂಲನೆ) ಕಾಯಿದೆ ಸೆಕ್ಷನ್‍ಗಳಾದ 3(1) (ಡಬ್ಲ್ಯು) (1)(2), 3(2)ಅನ್ನು ಹೆಚ್ಚುವರಿಯಾಗಿ ಚಿತ್ರದುರ್ಗ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಸೆಪ್ಟೆಂಬರ್ 1ರಂದು ಮುರುಘಾ ಶರಣ ಬಂಧನವಾಗಿತ್ತು.

ಜೀವ ಬೆದರಿಕೆ ಹಾಕ್ತಿದ್ದ ರಶ್ಮಿ:
ಮಹಿಳಾ ವಾರ್ಡನ್ ರಶ್ಮಿ ಮೂಲಕ ಬಾಲಕಿಯರನ್ನು ಕರೆಸಿ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಮುರುಘಾ ಶರಣ ವಿರುದ್ಧ ಆರೋಪವಿದೆ. ಮತ್ತು ಭರಿಸುವ ಔಷಧಿ ಬೆರೆಸಿದ ಸೇಬುಹಣ್ಣು ನೀಡಿ ಮಕ್ಕಳನ್ನು ಕಚೇರಿ, ಬೆಡ್‍ರೂಂ, ಬಾತ್ ರೂಂಗೆ ಕರೆದೊಯ್ದು ಬಲತ್ಕಾರ ಮಾಡಲಾಗಿದೆ. ವಿರೋಧಿಸಿದರೆ ವಾರ್ಡನ್ ರಶ್ಮಿ ಜೀವ ಬೆದರಿಕೆ ಹಾಕುತ್ತಿದ್ದರು ಎಂಬುದನ್ನು ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಲಾಗಿದೆ.

ಚಳಿಗಾಲದ ಅಲರ್ಜಿಯಿಂದ ಪಾರಾಗಬೇಕಾದರೆ ಈ 6 ಆಹಾರ ಸೇವಿಸಿ

ಇನ್ನು ಮುರುಘಾಶ್ರೀಗಳ ವಿರುದ್ಧ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಗಂಭೀರ ಆರೋಪಗಳು ಕೇಳಿಬಂದಿದೆ. ಕೆಲ ವರ್ಷದ ಹಿಂದೆ ಓರ್ವ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ನಡೆದಿತ್ತು ಎಂಬ ಸಂತ್ರಸ್ತ ಬಾಲಕಿಯರ ಹೇಳಿಕೆ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಂಧ್ರಪ್ರದೇಶ ಮೂಲದ ಬಾಲಕಿ ಮಠದ ಹಾಸ್ಟೆಲ್‍ನಲ್ಲಿದ್ದಳು. ಆಂಧ್ರಕ್ಕೆ ತೆರಳಿದ್ದ ವೇಳೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ ಎಂಬ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಆದರೆ ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

ಆ ಬಾಲಕಿ ಯಾರು? ಅಪಘಾತ ಯಾವಾಗ ಮತ್ತು ಎಲ್ಲಿ ನಡೆದಿದೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಈ ಬಗ್ಗೆ ಸಂತ್ರಸ್ತ ಮಕ್ಕಳು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಸದ್ಯ ಮಠದ ಹಾಸ್ಟೆಲ್‍ನಲ್ಲಿದ್ದ ಮತ್ತಷ್ಟು ಮಕ್ಕಳ ವಿಚಾರಣೆ ನಡೆಸಲಾಗುತ್ತಿದೆ. ಸಂತ್ರಸ್ತರ ಹೇಳಿಕೆ ಅಧರಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ವೇಳೆ ಮತ್ತಷ್ಟು ಮಕ್ಕಳು ದೂರು ನೀಡಿದರೆ ಮುರುಘಾ ಶರಣರಿಗೆ ಕಂಟಕ ಎದುರಾಗಲಿದೆ. ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ನೆರವಿನೊಂದಿಗೆ ಇಬ್ಬರು ಅಪ್ರಾಪ್ತ ಬಾಲಕಿಯರು ಮೈಸೂರಿನಲ್ಲಿ ದೂರು ದಾಖಲಿಸಿದ ನಂತರ ಪೋಕ್ಸೊ ಕಾಯ್ದೆ ಮತ್ತು ಅತ್ಯಾಚಾರ ಆರೋಪದಲ್ಲಿ ಮುರುಘಾ ಮಠಾೀಶರಾಗಿದ್ದ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಸೆಪ್ಚೆಂಬರ್ 1 ರಂದು ಬಂಧಿಸಿದ್ದರು.

Articles You Might Like

Share This Article