Monday, May 12, 2025
Homeಜಿಲ್ಲಾ ಸುದ್ದಿಗಳು | District Newsಚಿತ್ರದುರ್ಗ | Chitradurgaಚಿತ್ರದುರ್ಗ : ಇನ್ನೋವಾ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ, ಮೂವರು ಸಾವು

ಚಿತ್ರದುರ್ಗ : ಇನ್ನೋವಾ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ, ಮೂವರು ಸಾವು

Chitradurga: Three killed in horrific accident between Innova car and lorry

ಚಿತ್ರದುರ್ಗ,ಮೇ.12-ಇನ್ನೋವಾ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಮೂವರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿಂದು ಮುಂಜಾನೆ ನಡೆದಿದೆ ಮೃತರನ್ನು ಸುನಿತಾ (34), ಶ್ಯಾಮ್ (29) ಮತ್ತು ಶಿವು (35) ಎಂದು ಗುರುತಿಸಲಾಗಿದೆ.

ಮುಂಜಾನೆ 3 ಗಂಟೆ ವೇಳೆಗೆ ಕಣಿವೆ ಆಂಜನೇಯ ದೇಗುಲ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಆಂಧ್ರ ಪ್ರದೇಶ ಮೂಲದ್ದಾಗಿದ್ದು, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆದು ಹೊಳಲ್ಕೆರೆಯ ಶವಾಗಾರಕ್ಕೆ ಸಾಗಿಸಲಾಗಿದೆ.ಲಾರಿ ಚಾಲಕನನ್ನು ಬಮಧಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

RELATED ARTICLES

Latest News