Thursday, May 2, 2024
Homeರಾಜ್ಯಚುನಾವಣೆ ಹಿನ್ನೆಲೆಯಲ್ಲಿ ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗಳಲ್ಲಿ ಒಪ್ಪಿಸಲು ಆದೇಶ

ಚುನಾವಣೆ ಹಿನ್ನೆಲೆಯಲ್ಲಿ ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗಳಲ್ಲಿ ಒಪ್ಪಿಸಲು ಆದೇಶ

ಬೆಂಗಳೂರು,ಮಾ.16- ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಠೇವಣಿ ಮಾಡಬೇಕಾಗಿದೆ.ಲೋಕಸಭೆ ಚುನಾವಣೆಗೆ ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಚುನಾವಣೆಯನ್ನು ಮುಕ್ತ ಮತ್ತು ಶಾಂತಿಯುತವಾಗಿ ನಡೆಸಲು ಪರವಾನಗಿ ಪಡೆದ ಶಸ್ತ್ರಾಸ್ತ್ರಗಳ ಠೇವಣಿ ಕುರಿತು ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಕ್ರೀನಿಂಗ್ ಸಮಿತಿ ರಚಿಸಿ ಆದೇಶಿಸಲಾಗಿದೆ.

ಪರವಾನಗಿ ಪಡೆದ ಶಸ್ತ್ರಾಸ್ತ್ರಗಳ ಠೇವಣಿಯಿಂದ ವಿನಾಯಿತಿ ಪಡೆಯಲಿಚ್ಚಿಸುವವರು ಮಾರ್ಚ್ 19ರೊಳಗೆ ತಮ್ಮ ಮನವಿಗಳನ್ನು ಸಕಾರಣದೊಂದಿಗೆ ತಮ್ಮ ವ್ಯಾಪ್ತಿಯ ಡಿವೈಎಸ್ಪಿ ಕಚೇರಿಗೆ ಸಲ್ಲಿಸಬಹುದಾಗಿದೆ.

ಸಾರ್ವಜನಿಕರಿಂದ ಸ್ವೀಕೃತವಾದ ಮನವಿಗಳನ್ನು ಸ್ಕ್ರೀನಿಂಗ್ ಕಮಿಟಿಯಲ್ಲಿ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ. ಸ್ಕ್ರೀನಿಂಗ್ ಕಮಿಟಿಯ ನಿರ್ಣಯವು ಅಂತಿಮವಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿ ಡಾ.ಶಿವಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Latest News