ಚುನಾವಣೆ ಹಿನ್ನೆಲೆಯಲ್ಲಿ ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗಳಲ್ಲಿ ಒಪ್ಪಿಸಲು ಆದೇಶ

ಬೆಂಗಳೂರು,ಮಾ.16- ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಠೇವಣಿ ಮಾಡಬೇಕಾಗಿದೆ.ಲೋಕಸಭೆ ಚುನಾವಣೆಗೆ ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಚುನಾವಣೆಯನ್ನು ಮುಕ್ತ ಮತ್ತು ಶಾಂತಿಯುತವಾಗಿ ನಡೆಸಲು ಪರವಾನಗಿ ಪಡೆದ ಶಸ್ತ್ರಾಸ್ತ್ರಗಳ ಠೇವಣಿ ಕುರಿತು ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಕ್ರೀನಿಂಗ್ ಸಮಿತಿ ರಚಿಸಿ ಆದೇಶಿಸಲಾಗಿದೆ. ಪರವಾನಗಿ ಪಡೆದ ಶಸ್ತ್ರಾಸ್ತ್ರಗಳ ಠೇವಣಿಯಿಂದ ವಿನಾಯಿತಿ ಪಡೆಯಲಿಚ್ಚಿಸುವವರು ಮಾರ್ಚ್ 19ರೊಳಗೆ ತಮ್ಮ ಮನವಿಗಳನ್ನು ಸಕಾರಣದೊಂದಿಗೆ ತಮ್ಮ ವ್ಯಾಪ್ತಿಯ ಡಿವೈಎಸ್ಪಿ ಕಚೇರಿಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಂದ ಸ್ವೀಕೃತವಾದ … Continue reading ಚುನಾವಣೆ ಹಿನ್ನೆಲೆಯಲ್ಲಿ ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗಳಲ್ಲಿ ಒಪ್ಪಿಸಲು ಆದೇಶ