ಬೆಂಗಳೂರು, ಸೆ.21- ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಟ್ವಿಟ್ಟರ್‍ನಲ್ಲಿ ಸ್ಪಷ್ಟಪಡಿಸಿರುವ ಅವರು, ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 43 ಸಾವಿರ ಪೌರ ಕಾರ್ಮಿಕರ ಸೇವೆ ಖಾಯಂ ಮಾಡಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತಾದ ಐಪಿಡಿ ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ : BREAKING : ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್ ವಿಧಿವಶ
ಪೌರ ಕಾರ್ಮಿಕರಿಗೆ ಎಲ್ಲ ಸೌಲಭ್ಯ ದೊರೆಯುವಂತೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಈಗಾಗಲೇ 11 ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಈಗ 43 ಸಾವಿರ ಪೌರಕಾರ್ಮಿಕರ ಸೇವೆ ಖಾಯಂಗೆ ಮುಂದಾಗಿದೆ.
"ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. I.P.D ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ" : ಮುಖ್ಯಮಂತ್ರಿ @BSBommai
— CM of Karnataka (@CMofKarnataka) September 21, 2022