ತಮಿಳುನಾಡಿನಲ್ಲಿ ನಿಲ್ಲದ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ, ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ

Social Share

ಚೆನ್ನೈ, ಜು.27- ತಮಿಳು ನಾಡಿನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದ್ದು ಕಳೆದ ರಾತ್ರಿ ಶಿವಕಾಶಿಯಲ್ಲಿ 11ನೇ ತರಗತಿಯ ವಿದ್ಯಾರ್ಥಿನಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕುಟುಂಬದ ಪ್ರಕಾರ ಆಕೆಗೆ ತೀವ್ರ ಹೊಟ್ಟೆ ನೋವು ಬಾಸುತ್ತಿತ್ತು. ಇದರಿಂದ ಆಕೆ ಸಾಕಷ್ಟು ಕಿನ್ನತೆಗೆ ಒಳಗಾಗಿದ್ದಾಳೆ ಎಂದು ಹೇಳಿದ್ದಾಳೆ. ಆದರೂ ಈಕೆಯ ಸಾವಿನ ಬಗ್ಗೆ ಹಲವಾರು ಅನುಮಾನಗಳು ಸೃಷ್ಟಿಯಾಗಿವೆ.

ಕಳೆದ ಒಂದು ವಾರದಲ್ಲಿ ಈವರೆಗೆ ಸುಮಾರು 4 ವಿದ್ಯಾರ್ಥಿನಿಗಳು ಆತ್ಮಹತ್ಯೆಗೆ ಶರಣಾಗಿದ್ದು ರಾಜ್ಯಸರ್ಕಾರ ತೀವ್ರ ಇಕ್ಕಟ್ಟಿಗೆ ಸಿಲುಕಿದೆ. ಎಲ್ಲಾ ಪ್ರಕರಣಗಳನ್ನು ಸಿಐಡಿ ತನಿಖೆ ನಡೆಸುತ್ತಿದ್ದು, ವಿಚಾರಣೆ ಹಂತದಲ್ಲೆ ಇದ್ದು, ಪೋಷಕರು, ಸಂಬಂಧಿಕರು ಹಾಗೂ ಸಾರ್ವಜನಿಕರ ಆಕ್ರೋಶ ಹೆಚ್ಚಾಗುತ್ತಿದೆ.

ಈಗಾಗಲೇ ಮುಖ್ಯಮಂತ್ರಿ ಸ್ಟ್ಯಾಲಿನ್ ಅವರು ವಿದ್ಯಾರ್ಥಿಗಳಿಗೆ ತಾಳ್ಮೆ ಕಳೆದುಕೊಳ್ಳದಂತೆ ಮನವಿ ಮಾಡಿದ್ದಾರೆ. ಬಾಲಕಿಯರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ.

ಕಳೆದ ಜು.13ರಂದು ಕಳರಕುಚ್ಚಿ ಜಿಲ್ಲೆಯಲ್ಲಿ ಖಾಸಗಿ ವಸತಿ ಶಾಲೆಯಲ್ಲಿ ಇಬ್ಬರು ಶಿಕ್ಷಕರು ನಿಂಧಿಸಿದ ಕಾರಣ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ನಂತರ ರಾಜ್ಯದಲ್ಲಿ ವಿದ್ಯಾರ್ಥಿನಿಯರ ಆತ್ಮಹತ್ಯೆ ಹೆಚ್ಚಾಗುತ್ತಿದೆ.
ಇದು ಇಡೀ ದೇಶಾದ್ಯಂತ ಸದ್ದು ಮಾಡುತ್ತಿದ್ದು, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿವೆ.

Articles You Might Like

Share This Article