ನವದೆಹಲಿ, ಜ.10-ರಾಷ್ಟ್ರ ರಾಜಧಾನಿಯ ಶಾಲೆಗಳಿಗೆ ಬಾಂಬ್ ಬೆದರಿಕೆಗಳನ್ನು ಕಳುಹಿಸಿದ್ದ ಆರೋಪದ ಮೇಲೆ ದೆಹಲಿ ಪೊಲೀಸರು 12 ನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಸುಮಾರು 10 ಶಿಕ್ಷಣ ಸಂಸ್ಥೆಗಳಿಗೆ ನಿನ್ನೆ ಬಾಂಬ್ ಬೆದರಿಕೆ ಬಂದಿದ್ದು,ಎಚ್ಚೆತ್ತ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಕಂಡುಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ದಕ್ಷಿಣ ಜಿಲ್ಲಾ ಪೊಲೀಸರು ಪ್ರಕಾರ 12 ನೇ ತರಗತಿ ವಿದ್ಯಾರ್ಥಿಯು ಅಪ್ರಾಪ್ತ ವಯಸ್ಕನಾಗಿದ್ದುಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸ್ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.