ಚಾಮರಾಜನಗರ : ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ಧಾರಣ ಘಟನೆ ನಡೆದಿದೆ. ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಮೃತಪಟ್ಟಿದ್ದಾಳೆ.
ಇಂದು ಬೆಳಗ್ಗೆ ಎಂದಿನಂತೆ ಶಾಲೆಗೆ ಬಂದು ಶಿಕ್ಷಕರು ನೋಟ್ ಬುಕ್ ತೋರಿಸಲು ಹೇಳಿದಾಗ ಅವರ ಬಳಿ ಹೋಗುತ್ತಿದ್ದಂತೆ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ಜೆಎಸ್ಎಸ್ ಆಸ್ಪತ್ರೆಗೆ ಕರೆದೊಯ್ದದರು ಅಷ್ಟರೊಳಗೆ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ .
ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ. ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡ ಪೋಷಕರ ಗೋಳು ನೋಡತೀರದಂತಾಗಿದೆ.