KSRTC ಹಾಗೂ KPTCL ನೌಕರರ ವೇತನ ಪರಿಷ್ಕರಣೆಗೆ ಸಿಎಂ ಸಮ್ಮತಿ

Social Share

ಬೆಂಗಳೂರು,ಮಾ.16- ಬಹುದಿನಗಳ ಬೇಡಿಕೆಯಂತೆ ರಾಜ್ಯ ರಸ್ತೆ ಸಾರಿಗೆ ನೌಕರರು(ಕೆಎಸ್‍ಆರ್‍ಟಿ) ಹಾಗೂ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ವೇತನ ಪರಿಷ್ಕರಣೆಗೆ ಕೊನೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ.

ಇಂದಿನಿಂದಲೇ ಜಾರಿಯಾಗುವಂತೆ ಕೆಎಸ್‍ಆರ್‍ಟಿಸಿ ನೌಕರರ ಶೇ.15ರಷ್ಟು ಹಾಗೂ ಕೆಪಿಟಿಸಿಎಲ್ ನೌಕರರ ಶೇ.20ರಷ್ಟು ವೇತನವನ್ನು ಪರಿಷ್ಕರಣೆ ಮಾಡುವ ಮೂಲಕ ಎರಡೂ ಇಲಾಖೆಯ ನೌಕರರಿಗೆ ಯುಗಾದಿ ಹಬ್ಬದ ಉಡುಗೊರೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡುಮೂರು ವರ್ಷಗಳಿಂದ ಸಾರಿಗೆ ನೌಕರರು ತಮ್ಮ ವೇತನವನ್ನು ಪರಿಷ್ಕರಣೆ ಮಾಡಿಲ್ಲ ಎಂದು ಮನವಿ ಮಾಡಿಕೊಂಡಿದ್ದರು. ಈ ಹಿನ್ನಲೆಯಲ್ಲಿ ನಿಗಮದ ಎಲ್ಲ ವ್ಯವಸ್ಥಾಪಕ ನಿರ್ದೇಶಕರು, ಮತ್ತಿತರ ಜೊತೆ ಸುದೀರ್ಘ ಚರ್ಚೆ ನಡೆಸಿ ಅಂತಿಮವಾಗಿ ಸಾರಿಗೆ ನೌಕರರ ಶೇ.15ರಷ್ಟು ವೇತನ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಹೊಸ ಆದೇಶ ಗುರುವಾರದಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದರು.

ಇನ್ನು ಕೆಪಿಟಿಸಿಎಲ್ ನೌಕರರ ವೇತನವನ್ನು ಪರಿಷ್ಕರಣೆ ಮಾಡಲಾಗಿದೆ. ಶೇ.20ರಷ್ಟು ಪರಿಷ್ಕರಣೆ ಮಾಡಲಾಗಿದ್ದು, ಪ್ರತಿಭಟನೆಯನ್ನು ನಡೆಸಬಾರದು ಎಂದು ಮನವಿ ಮಾಡಿಕೊಂಡರು.

ಆಕ್ಷೇಪ: ನೆರೆಯ ಮಹಾರಾಷ್ಟ್ರ ಸರ್ಕಾರ ಗಡಿಭಾಗದಲ್ಲಿ ಕನ್ನಡಿಗರಿಗೆ ಆರೋಗ್ಯ ವಿಮೆ ಜಾರಿ ಮಾಡಿರುವುದಕ್ಕೆ ಸಿಎಂ ಬೊಮ್ಮಾಯಿ ಕಿಡಿಕಾರಿದರು.ಎರಡೂ ರಾಜ್ಯಗಳು ಸುಪ್ರೀಂಕೋರ್ಟ್ ತೀರ್ಪು ಬರುವರೆಗೂ ಯಾವುದೇ ರೀತಿಯ ಕಾನೂನು ಉಲ್ಲಂಘನೆ ಮಾಡಬಾರದು ಎಂದು ಖುದ್ದು ಕೇಂದ್ರ ಗೃಹಸಚಿವ ಅಮಿತ್ ಷಾ ಅವರೇ ಸೂಚನೆ ಕೊಟ್ಟಿದ್ದರು. ಆದರೆ ಮಹಾರಾಷ್ಟ್ರದ ಸಚಿವ ಸಂಪುಟ ಗಡಿಭಾಗದ ಜನರಿಗೆ ಆರೋಗ್ಯ ವಿಮೆ ಮಾಡಿಸುವ ಮೂಲಕ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೈದ್ರಾಬಾದ್‍ನಲ್ಲಿ ರಾರಾಜಿಸುತ್ತಿವೆ ಬಿ.ಎಲ್ ಸಂತೋಷ್ ವಿರುದ್ಧದ ಪೋಸ್ಟರ್

ವಾಸ್ತವವಾಗಿ ಗಡಿಭಾಗದ ಜನರಿಗೆ ಮೂಲಸೌಕರ್ಯಗಳನ್ನು ನಾವು ಕಲ್ಪಿಸಿಕೊಡಬೇಕು ಅಲ್ಲಿನ ಜನರೇ ಮೂಲ ಸೌಕರ್ಯಗಳಿಲ್ಲ ಎಂದು ನಮ್ಮ ಗಮನಕ್ಕೆ ತಂದಿದ್ದಾರೆ. ಪ್ರಕರಣ ಇತ್ಯರ್ಥವಾಗುವವರೆಗೂ ಈ ರೀತಿ ಮಾಡುವುದು ಸರಿಯಲ್ಲ . ಮಹಾರಾಷ್ಟ್ರದ ಸಚಿವ ಸಂಪುಟದ ನಿರ್ಣಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಜೊತೆ ನಾನು ಮಾತುಕತೆ ನಡೆಸುತ್ತೇನೆ. ತಕ್ಷಣವೇ ಸಚಿವ ಸಂಪುಟದ ನಿರ್ಣಯವನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿ ನಮ್ಮ ವಿರೋಧವನ್ನು ಸಹ ತಿಳಿಸಲಾಗುವುದು.

ಅಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಗಮನಕ್ಕೂ ತರುತ್ತೇವೆ. ಯಾವುದೇ ಕಾರಣಕ್ಕೂ ನೆಲಜಲದ ವಿಷಯದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ವಿನಾಕಾರಣ ರಾಜಕಾರಣ: ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್ ಹೈವೇಯಲ್ಲಿ ಟೋಲ್ ಸಂಗ್ರಹಣೆ ಕುರಿತು ಉಂಟಾಗಿರುವ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಸಿರುವ ಪದ ಬಳಕೆ ಯಾವುದೇ ಪಕ್ಷ ಹಾಗೂ ಮುಖಂಡರಿಗೆ ಶೋಭೆ ತರುವಂತದಲ್ಲ. ಅವರ ಗಮನಕ್ಕೆ ತಕ್ಕಂತೆ ಮಾತನಾಡಲಿ ಎಂದು ತಿರುಗೇಟು ನೀಡಿದರು.

ಟೋಲ್ ಸಂಗ್ರಹಣೆ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಕಾರದ ಅಕಾರಿಗಳು ಸೂಕ್ತವಾದ ತೀರ್ಮಾನ ಕೈಗೊಳ್ಳುತ್ತಾರೆ. ಕೆಲವು ಕಡೆ ಸರ್ವೀಸ್ ರಸ್ತೆಗಳನ್ನು ಮಾಡಲಾಗಿದ್ದು, ಅಗತ್ಯವಿದ್ದರೆ ಇಂತಹ ಕಡೆಯೂ ಬಳಕೆ ಮಾಡಿಕೊಳ್ಳಬೇಕು. ಆದರೆ ಕೆಲವರು ಇದನ್ನು ರಾಜಕಾರಣ ಮಾಡಲು ಹೊರಟ್ಟಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದು ಅತ್ಯಂತ ದುರದೃಷ್ಟಕರ. ಎಲ್ಲದರಲ್ಲೂ ರಾಜಕಾರಣ ಮಾಡುವುದು ಆ ಪಕ್ಷದ ಕೆಲಸವಾಗಿದೆ ಎಂದು ವಾಗ್ದಾಳಿ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಟೋಲ್ ರಸ್ತೆ ಎಂದು ಎಲ್ಲರಿಗೂ ಗೊತ್ತಿದೆ. ಇದು ಜನ ಸಾಮಾನ್ಯರಲ್ಲ, ಇದನ್ನ ರಾಜಕೀಯ ಗೊಳಿಸುತ್ತಿದ್ದಾರೆ. ನಾವು ಕಾನೂನು ಪ್ರಕಾರ ಮಾಡುತ್ತೇವೆ. ಕಾನೂನು ಬಿಟ್ಟು ಏನು ಮಾಡುವುದಿಲ್ಲ ಎಂದರು.
ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಾಡ್ಗಿಚ್ಚು ಆಗುತ್ತದೆ. ಈಗಾಗಲೇ ಅರಣ್ಯಾಕಾರಿಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದೇನೆ. ಆಕ್ಷನ್ ಪ್ಲಾನ್ ಮಾಡಿ ತಾಂತ್ರಿಕ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಇದೇ ವೇಳೆ ಬೊಮ್ಮಾಯಿ ತಿಳಿಸಿದರು.

#CM, #approves, #salaryrevision, #KSRTC, #KPTCL, #employees,

Articles You Might Like

Share This Article