Saturday, April 20, 2024
Homeರಾಷ್ಟ್ರೀಯಕೇಜ್ರಿವಾಲ್‍ಗೆ ಏ.15ರವರೆಗೆ ನ್ಯಾಯಾಂಗ ಬಂಧನ

ಕೇಜ್ರಿವಾಲ್‍ಗೆ ಏ.15ರವರೆಗೆ ನ್ಯಾಯಾಂಗ ಬಂಧನ

ನವದೆಹಲಿ, ಎ.1-ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಕಸ್ಟಡಿಯಲ್ಲಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದಿಲ್ಲಿ ನ್ಯಾಯಾಲಯವು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅಂತ್ಯಗೊಂಡ ನಂತರ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ವಿಚಾರಣೆ ನಂತರ ವಿಶೇಷ ನ್ಯಾಯಾೀಧಿಶ ಕಾವೇರಿ ಬವೇಜಾ ಅವರು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಈ ವೇಳೆ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದು ಜಾಮೀಜಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮರುದಿನ, ವಿಶೇಷ ನ್ಯಾಯಾಧೀಶ ಬವೇಜಾ ಅವರನ್ನು ಮಾರ್ಚ್ 28 ರವರೆಗೆ ಇಡಿ ವಶಕ್ಕೆ ನೀಡಿದರು.

ಇದರ ಬೆನ್ನಲ್ಲೇ, ಆತನ ಕಸ್ಟಡಿ ವಿಚಾರಣೆಯನ್ನು ಏಪ್ರಿಲ್ 1 ರವರೆಗೆ ನಾಲ್ಕು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಇಡಿ ಸಲ್ಲಿಸಿದ ಮನವಿಯನ್ನು ನ್ಯಾಯಾಲಯವು ಅಂಗೀಕರಿಸಿತು.

ತನ್ನ ರಿಮಾಂಡ್ ಅರ್ಜಿಯಲ್ಲಿ, ತನಿಖಾ ಸಂಸ್ಥೆಯು ಎಎಪಿ ನಾಯಕ ದೆಹಲಿ ಮದ್ಯ ಹಗರಣದ ಸಂಪೂರ್ಣ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ, ನೀತಿಯ ಕರಡು ಮತ್ತು ಅನುಷ್ಠಾನದಲ್ಲಿ, ಕಿಕ್‍ಬ್ಯಾಕ್ ಪಡೆಯುವ ಕ್ವಿಡ್ ಪ್ರೊಗೆ ಅನುಕೂಲ ಮತ್ತು ಲಾಭಕ್ಕಾಗಿ ಮತ್ತು ಅಂತಿಮವಾಗಿ ಆದಾಯದ ಭಾಗವನ್ನು ಬಳಸಿದ್ದಾರೆ ಎಂದು ಆರೋಪಿಸಿದೆ.

RELATED ARTICLES

Latest News