ಉಕ್ರೇನ್‍ನಲ್ಲಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಕ್ರಮ : ಸಿಎಂ

Social Share

ಬೆಂಗಳೂರು, ಫೆ.24- ದೂರದ ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಲ್ಲಿ ರಾಜ್ಯದಿಂದ ಉನ್ನತ ವ್ಯಾಸಂಗಕ್ಕೆ ಅನೇಕ ವಿದ್ಯರ್ಥಿಗಳು ತೆರಳಿದ್ದಾರೆ. ಇದೀಗ ಅಲ್ಲಿ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿರುವುದರಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಮರಳಿ ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ ಮುಂದುವರೆದಿದೆ ಎಂದು ತಿಳಿಸಿದರು.
ರಾಜ್ಯದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಕ್ರೇನ್ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದಾರೆ. ಅವರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಅಲ್ಲಿನ ರಾಯಭಾರಿ ಕಚೇರಿಗೆ ವಿದ್ಯಾರ್ಥಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ ಎಂದರು.
ಈ ಮೊದಲು ಯುದ್ಧ ಆರಂಭಕ್ಕೂ ಮೊದಲೇ ತಂಡ ತಂಡವಾಗಿ ಕರೆಸಿಕೊಳ್ಳಲಾಗುತ್ತಿತ್ತು. ಆದರೆ, ಈಗ ಉಳಿದಿರುವ ವಿದ್ಯಾರ್ಥಿಗಳು ಕೊನೆಯ ತಂಡವಾಗಿದೆ. ಬಹುತೇಕ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಯುದ್ಧ ಆರಂಭವಾದ ಕಾರಣ ಅಲ್ಲೇ ಸಿಲುಕಿದ್ದಾರೆ ಎಂದು ಹೇಳಿದರು.
ನೂರು ಮಂದಿ ಭಾರತೀಯ ವಿದ್ಯಾರ್ಥಿಗಳಲ್ಲಿ ಹತ್ತು ಜನ ನಮ್ಮ ರಾಜ್ಯದವರೇ ಆಗಿದ್ದಾರೆ. ಅವರನ್ನು ಸ್ವದೇಶಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ. ನಮ್ಮ ವಿದೇಶಾಂಗ ಕಾರ್ಯದರ್ಶಿ ಜೊತೆ ಸಂಪರ್ಕದಲ್ಲಿದ್ದೇವೆ. ಉಕ್ರೇನ್‍ನಲ್ಲಿರುವ ಭಾರತೀಯ ರಾಯಭಾರಿ ಕೂಡ ಅಲ್ಲಿನ ಅಕಾರಿಗಳಿಗೆ ಮಾಹಿತಿಯನ್ನೂ ಕೊಟ್ಟಿದ್ದಾರೆ. ಎಲ್ಲ ವಿದ್ಯಾರ್ಥಿಗಳು ಸಂಪರ್ಕದಲ್ಲಿದ್ದಾರೆ. ಯಾವುದು ಸುರಕ್ಷಿತ ಸ್ಥಳ ಎಂಬ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Articles You Might Like

Share This Article